Belagavi

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಸೂಚನೆ ನೀಡಿದ ಸಿಎಂ: ಕುತೂಹಲದಿಂದ ಕೂಡಿದ ಇಂದಿನ ಅಧಿವೇಶನ


ಬೆಳಗಾವಿ: ಹಲವು ನಿರೀಕ್ಷೆಗಳನ್ನು ಹೊತ್ತು ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾನೂನು ಸಚಿವ ಮಾಧುಸ್ವಾಮಿ ಕೂಡ ವಿವಾಹ ನೋಂದಣಿ ಮಾಡುವಂತೆ ಮತಾಂತರವನ್ನೂ ಕೂಡ ನೋಂದಣಿ ಮಾಡುವಂತಹ ಪದ್ಧತಿಯನ್ನು ಮತಾಂತರ ನಿಷೇಧ ಕಾಯಿದೆಯಲ್ಲಿ ತರುವ ಚಿಂತನೆ ಇದೆ ಎಂದು ಹೇಳಿದ್ದು ಸರಕಾರ ತರಲು ಹೊರಟಿರುವ ಈ ಕಾಯ್ದೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವೃ ವಿರೋಧ  ವ್ಯಕ್ತಪಡಿಸಿದ್ದಾರೆ.

ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುವಂತೆ ಧಾರ್ಮಿಕ ಮುಖಂಡರು ಹಾಗೂ ಮಠಾಧೀಶರು ಒತ್ತಡ ತಂದಿದ್ದು, ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಕರಡು ಸಿದ್ದಪಡಿಸಲಾಗಿದೆ ಹಾಗೂ ಕಾನೂನು ಪರಾಮರ್ಶೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಮತಾಂತರ ನಿಷೇಧ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಮತಾಂತರ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಂಶವನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.


Leave a Reply