Belagavi

ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ : ಗೃಹಸಚಿವ


ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾನೂನು ಮಂಡನೆ ಮಾಡುತ್ತೇವೆ.ರಾಜ್ಯದಲ್ಲಿ ಬಲವಂತದ ಮತಾಂತರ ತಡೆಯಬೇಕಾಗಿದೆ. ಹೀಗಾಗಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುತ್ತಿದ್ದೇವೆ. ವಿಪಕ್ಷಗಳ ಆರೋಪ ಯಾವುದೇ ಕಣ್ಣೊರೆಸುವ ತಂತ್ರವಲ್ಲ ಎಂದರು.

ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ಇಂದಿನಿಂದ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ಸಿದ್ದತೆ ನಡೆಸಿದ್ದು, ಮತಾಂತರ ನಿಷೇಧ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಮತಾಂತರ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಂಶವನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.


Leave a Reply