Belagavi

ಸಚಿವ ಜೆ.ಸಿ ಮಧುಸ್ವಾಮಿ ವಿರುದ್ಧ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ


ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯ ಮಾತಿನ ಚಕಮಕಿ ನಡೆದಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಯುಕೆ 27 ಹೋಟೆಲ್‍ನಲ್ಲಿ ಕಾನೂನು ಸಚಿವ
ಜೆ.ಸಿ.ಮಾಧುಸ್ವಾಮಿ ತಂಗಿದ್ದರು. ಇದೇ ವೇಳೆ ಕಾನೂನು ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.

ಹೋಟೆಲ್ ಗೇಟ್‍ಗೆ ಮುತ್ತಿಗೆ ಹಾಕಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಆಕ್ರೋಶಗೊಂಡ ಎಬಿವಿಪಿ ಕಾರ್ಯಕರ್ತರು ಪೊಲೀಸರ ಜೊತೆಗೆ ವಾಗ್ವಾದ ನಡೆಸಿದರು.

ಈ ವೇಳೆ ಸಚಿವ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾನೂನು ವಿದ್ಯಾರ್ಥಿ ಭೇಟಿಗೆ ಅಪಾಯಿಂಟ್‍ಮೆಂಟ್ ನೀಡಿದ್ರೂ ಕೂಡ ಅವಕಾಶ ನೀಡದ ಇವರು ಮಂತ್ರಿ ಏನ್ರಿ..? ನಾಳೆ ಎಬಿವಿಪಿಯಿಂದ ಬಂದ್‍ಗೆ ಕರೆ ಕೊಟ್ಟಿದ್ದೇವೆ. ರಾಜ್ಯಾಧ್ಯಂತ ಮಾಧ ಸ್ವಾಮಿ ವಿರುದ್ಧ ಹೋರಾಟ ಮಾಡುತ್ತೇವೆ

ನಾವು ಪರೀಕ್ಷೆ ಪರವಾಗಿ ಇದ್ದೇವೆ, ಆದರೆ ಪರೀಕ್ಷೆ ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ನಿರ್ಧರಿಸಬೇಕು ಎಂದು ಆಗ್ರಹಿಸಿದರು. ನಂತರ ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಎಬಿವಿಪಿ ಕಾರ್ಯಕರ್ತರು, ಕಾನೂನು ವಿದ್ಯಾರ್ಥಿಗಳನ್ನು ಅಲ್ಲಿಂದ ಬೇರೆ ಕಡೆ ರವಾನಿಸಿದರು.


Leave a Reply