Belagavi

ಬೆಳೆ ಪರಿಹಾರ ಹೆಚ್ಚಳ: ಕೇಂದ್ರಕ್ಕೆ ಮನವಿ


(ಸುವರ್ಣ ವಿಧಾನ ಸೌಧ ಬೆಳಗಾವಿ) ಡಿ.೧೪: ಬೆಳೆ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ನು ಪರಿಷ್ಕರಿಸಿ ಹೆಚ್ಚಿನ ಪರಿಹಾರ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು ತಿಳಿಸಿದರು.
ಮೇಲ್ಮನೆಯಲ್ಲಿ ಹಿರಿಯ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಅತೀವೃಷ್ಟಿಯಿಂದ ಹಾನಿಯಾದ ಬೆಳೆಗಳ ಪರಿಹಾರ ಪಾವತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವರು ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಒಂದು ಹೆಕ್ಟೇರ್ ಖುಷ್ಕಿ ಪ್ರದೇಶದ ಕೃಷಿ ಬೆಳೆ ಹಾನಿಗೆ ೬,೮೦೦ ರೂ.., ನೀರಾವರಿ ಕ್ಷೇತ್ರಕ್ಕೆ ೧೩,೫೦೦ ರೂ. ಹಾಗೂ ಬಹು ವಾರ್ಷಿಕ ಬೆಳೆಗೆ ೧೮,೦೦೦ ರೂ.ಗಳಂತೆ ಪರಿಹಾರ ಪಾವತಿಸಲಾಗುತ್ತಿದೆ. ೧೨ ಲಕ್ಷ ರೈತರಿಗೆ ೭೮೭ ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಪ್ರತಿ ೫ ವರ್ಷಕ್ಕೊಮ್ಮೆ ಪರಿಹಾರ ದರ ಪರಿಷ್ಕೃತಗೊಳ್ಳುತ್ತಿದೆ. ೨೦೧೫ ರಲ್ಲಿ ದರ ಪರಿಷ್ಕೃತಗೊಂಡಿರುತ್ತದೆ. ಪರಿಹಾರ ಧನ ಪರಿಷ್ಕರಿಸಿ ಹೆಚ್ಚಿನ ಪರಿಹಾರ ನಿಗದಿಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ಸದನಕ್ಕೆ ತಿಳಿಸಿದರು.


Leave a Reply