Belagavi

ಪಿಡಬ್ಲೂö್ಯಡಿ ಇಂಜನಿಯರಿAಗ್ ನೇಮಕಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ:ಸಚಿವ ಈಶ್ವರಪ್ಪ


(ಸುವರ್ಣ ವಿಧಾನ ಸೌಧ ಬೆಳಗಾವಿ) ಡಿ.೧೪: ಕರ್ನಾಟಕ ಲೋಕಸೇವಾ ಆಯೋಗದ “ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರ ಹಾಗೂ ಕಿರಿಯ ಅಭಿಯಂತರರ ನೇಮಕಾತಿ” ಸ್ಪರ್ಧಾತ್ಮಕ ಪರೀಕ್ಷೆಯಿಂದ ವಂಚಿತರಾದ ಪರೀಕ್ಷಾರ್ಥಿಗಳಿಗೆ ಪರೀಕ್ಷೆಗೆ ಮತ್ತೊಮ್ಮೆ ಅವಕಾಶ ನೀಡಬೇಕೆ ಎನ್ನುವುದರ ಕುರಿತು ಚರ್ಚಿಸಿ ತೀರ್ಮಾನಿಸಲಾಗುವುದು;ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಲಾಗುವುದೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಸದನಕ್ಕೆ ತಿಳಿಸಿದರು.
ಸದಸ್ಯರಾದ ಶ್ರೀಕಂಠೇಗೌಡ ಅವರು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಕರ್ನಾಟಕ ಲೋಕಸೇವಾ ಆಯೋಗ ಮಂಗಳವಾರ ನಿಗದಿಪಡಿಸಿದ ಇಂಜನಿಯರಿAಗ್ ನೇಮಕಾತಿ ಪರೀಕ್ಷೆ ಅವೈಜ್ಞಾನಿವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಮುಂದೂಡಲ್ಪಟ್ಟ ಲೋಕೋಪಯೋಗಿ ಇಲಾಖೆಯ ಇಂಜನಿಯರಿAಗ್ ನೇಮಕಾತಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳನ್ನು ದಕ್ಷಿಣ ಕರ್ನಾಟಕ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಆಯೋಗ ನಿಯಮ ಹೊರಡಿಸಿದೆ. ಪರೀಕ್ಷಾ ದಿನವಾದ ಮಂಗಳವಾರ ಉದ್ಯಾನ ಎಕ್ಸ್ಪ್ರೆಸ್, ಬಸವ, ಕರ್ನಾಟಕ ಎಕ್ಸ್ಪ್ರೆಸ್ ಸೇರಿದಂತೆ ಹಲವು ರೈಲುಗಳು ನಿಗದಿತ ಸಮಯಕ್ಕಿಂತ ವಿಳಂಬವಾಗಿ ತಲುಪಿದ ಕಾರಣ ಸಾವಿರಾರು ಪರೀಕ್ಷಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗದೇ ವಂಚಿತರಾಗಿದ್ದಾರೆ. ಉದ್ಯೋಗ ಹೊಂದುವ ಕನಸು ಮರಿಚಿಕೆಯಾಗಿದೆ. ಕಾರಣ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರ ಕೆ.ಎಸ್. ಈಶ್ವರಪ್ಪ ಅವರು ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಸರ್ಕಾರ ಕ್ರಮವಹಿಸಲಿದೆ ಎಂದರು.
ಇದೇ ವಿಷಯ ವಿಧಾನ ಸಭೆಯಲ್ಲೂ ಪ್ರಸ್ತಾಪಗೊಂಡಿದ್ದು, ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ. ಮಾಧುಸ್ವಾಮಿ ಅವರು ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳ ಹಿತ ಕಾಪಾಡಲಾಗುವುದು. ಪರೀಕ್ಷೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.


Leave a Reply