Belagavi

ವಸತಿ ನಿಲಯಗಳ ಸ್ಥಾಪನೆಗೆ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಬೆಳಗಾವಿ ಸುವರ್ಣಸೌಧ,ಡಿ.೧೫: ಹಿಂದುಳಿದ ವರ್ಗಗಗಳ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ಪ್ರಾದೇಶಿಕ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಪೂರಕವಾಗಿ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ನಿಲಯಗಳ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿರುವ ವಸತಿ ನಿಲಯಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಂಬAಧಪಟ್ಟ ಇಲಾಖೆಗಳ ವಿಶೇಷ ಸಭೆಯನ್ನು ಕರೆದು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಲು ಪ್ರಯತ್ನಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಆದಾಯ ಹೆಚ್ಚಿಸಲು ಕ್ರಮ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲು ಸರ್ಕಾರ ಈಗಾಗಲೇ ಶ್ರೀನಿವಾಸ ಮೂರ್ತಿ ಅವರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ, ಸಾರ್ವಜನಿಕರಿಗೆ ಹೊರೆಯಾಗದಂತೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದರು.

ಸಂಚಾರ ಮಿತಿ ಹೆಚ್ಚಳ ಪರಿಶೀಲನೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಸ್‌ಪಾಸ್ ಸಂಚಾರ ಮಿತಿಯನ್ನು ೧೦೦ಕಿಮೀಗೆ ಏರಿಸುವ ಬಗ್ಗೆ ಪರಿಶೀಲಿಸುವುದಾಗಿ ಸಚಿವ ಶ್ರೀರಾಮುಲು ಅವರು ತಿಳಿಸಿದರು.

ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಲಿ ಇರುವ ೬೦ಕಿಮೀ ಮಿತಿಯಿಂದ ೧೦೦ಕಿಮೀಗೆ ಹೆಚ್ಚಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿರುವುದರಿAದ ಶೈಕ್ಷಣಿಕ ದಾಖಲೆಗಳನ್ನು ಒದಗಿಸಿ ಸೇವಾಸಿಂಧು ಮೂಲಕ ಕೂಡಾ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಹಳೆ ಬಸ್‌ಗಳ ಅನುಪಯುಕ್ತಗೊಳಿಸಲು ಕ್ರಮ: ಕೇಂದ್ರ ಸರ್ಕಾರದ ನೀತಿಯ ಪ್ರಕಾರ ೧೫ ವರ್ಷ ಪೂರೈಸಿದ ಅಥವಾ ೯ಲಕ್ಷ ಕಿಮೀ ಕ್ರಮಿಸಿದ ಸಂಸ್ಥೆಯ ಎಲ್ಲಾ ಬಸ್‌ಗಳನ್ನು ಅನುಪಯುಕ್ತಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಶಾಸಕ ಡಿ.ಕೆ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಸಚಿವರು ಈ ಸ್ಪಷ್ಟನೆ ನೀಡಿದರು. ಅಲ್ಲದೆ ಆರ್ಥಿಕ ಮಿತಿಯನ್ನು ಗಮನದಲ್ಲಿರಿಸಿಕೊಂಡು ಕುಶಾಲನಗರದಲ್ಲಿ ವಿಭಾಗೀಯ ಕಾರ್ಯಾಗಾರ ಆರಂಭಿಸಲು ಕ್ರಮ ವಹಿಸಲಾಗುವುದು ಎಂದು ಶಾಸಕ ಅಪ್ಪಚ್ಚು ರಂಜನ್ ಅವರ ಪ್ರಶ್ನೆಗೆ ಉತ್ತರಿಸಿದರು.

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ: ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವನ್ನು ಕಟ್ಟುನಿಟ್ಟಿನಿಂದ ತಡೆಯಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ವಿಧಾನಸಭೆಯಲ್ಲಿ ಶಾಸಕ ಬಸವನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮದ್ಯ ಮಾರಾಟಕ್ಕೆ ನಿಯಮಾವಳಿ ಪ್ರಕಾರ ಮಾತ್ರ ಅನುಮತಿಯನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ೨೦೧೮-೧೯ರಲ್ಲಿ ೧೫೯, ೧೯-೨೦ರಲ್ಲಿ ೨೦೬ ಮತ್ತು ೨೦-೨೧ರಲ್ಲಿ ೨೦೩ ಸಿಎಲ್-೯ ಪರವಾನಿಗೆ ನೀಡಲಾಗಿದೆ. ಅನಧಿಕೃತ ಮದ್ಯ ಮಾರಾಟ ತಡೆಗೆ ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಲಬೆರಕೆ ಮದ್ಯ ಮಾರಾಟ ಕುರಿತು ನಿರ್ದಿಷ್ಟ ಮಾಹಿತಿ ದೊರೆತರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇ-ಸ್ವತ್ತು ತಂತ್ರಾAಶ ಉನ್ನತೀಕರಣ: ಇ-ಸ್ವತ್ತು ತಂತ್ರಾAಶದಲ್ಲಿ ಎದುರಾಗಿದ್ದ ಸರ್ವರ್ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಸರ್ವರ್ ಸಮಸ್ಯೆಯನ್ನು ಬಗೆಹರಿಸಲು ಅದರ ಸ್ಟೋರೇಜ್ ಸಾಮರ್ಥ್ಯವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಸಾಫ್ಟ್ವೇರ್‌ನಲ್ಲಿ ಸಮಸ್ಯೆ ಎದುರಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಶಾಸಕ ರಾಜೇಶ ನಾಯಕ್ ಅವರು ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ತಿಂಗಳು ಸರ್ವರ್ ಸಮಸ್ಯೆಯಿಂದ ಗ್ರಾಮೀಣ ಪ್ರದೇಶದಲ್ಲಿ ಇ-ಖಾತೆ ನೀಡುವಲ್ಲಿ ವಿಳಂಬವಾಗಿತ್ತು. ಅದನ್ನು ಸರಿಪಡಿಸಲಾಗಿದೆ ಎಂದರು.


Leave a Reply