Belagavi

ರಾಯಚೂರು-ಕಾರವಾರದಲ್ಲೂ ವಿಮಾನ ನಿಲ್ದಾಣ ೨೦೨೨ರ ವರ್ಷಾಂತ್ಯಕ್ಕೆ ವಿಜಯಪುರ ವಿಮಾನ ನಿಲ್ದಾಣ ಪೂರ್ಣ: ಸಚಿವ ವಿ. ಸೋಮಣ್ಣ


ಬೆಳಗಾವಿ ಸುವರ್ಣಸೌಧ,ಡಿ.೧೫: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಡಿಸೆಂಬರ್ ೨೦೨೨ರೊಳಗಾಗಿ ಪೂರ್ಣಗೊಳಿಸಲಾಗುವುದು ವಸತಿ ಮತ್ತು ಮೂಲ ಸೌಕರ್ಯಗಳ ಖಾತೆ ಸಚಿವ ವಿ. ಸೋಮಣ್ಣ ಅವರು ಮೇಲ್ಮನೆಗೆ ತಿಳಿಸಿದರು.
ಸದಸ್ಯ ಪ್ರಕಾಶ ರಾಠೋಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು ವಿಜಯಪುರ ವಿಮಾನ ನಿಲ್ದಾಣಕ್ಕಾಗಿ ೭೨೭ ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಂದಾಜು ಒಟ್ಟಾರೆ ೨೨೦ ಕೋಟಿ ರೂ.ಗಳ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಕೈಗೊಳ್ಳಲಾಗಿದೆ. ೯೫ ಕೋಟಿ ರೂ. ವೆಚ್ಚದ ಮೊದಲ ಪ್ಯಾಕೇಜ್‌ದಡಿ ರನ್‌ವೇ, ಏಪ್ರಾನ್, ಟ್ಯಾಕ್ಸಿವೇ, ಆಂತರಿಕ ಮತ್ತು ಆವರಣ ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಶೇ. ೪೮ ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ. ಎರಡನೇ ಹಾಗೂ ಮೂರನೇ ಪ್ಯಾಕೇಜ್‌ದಡಿ ೧೨೫ ಕೋಟಿ ರೂ.ಮೊತ್ತದ ಕಟ್ಟಡ ಮತ್ತು ವಿದ್ಯುತ್ ಯಂತ್ರೋಪಕರಣ ಖರೀದಿಗೆ ಟೆಂಡರ್ ಕರೆಯಲಾಗಿದೆ. ತಾಂತ್ರಿಕ ಬಿಡ್ ಮೌಲ್ಯಮಾಪನ ಪೂರ್ಣಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.
ಮೇಲ್ಮನೆಯ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ ಹಾಗೂ ಎಸ್.ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ವಿಜಯಪುರ ಐತಿಹಾಸಿಕ ಸ್ಥಳವಾಗಿದ್ದು, ವಿಶ್ವ ವಿಖ್ಯಾತ ಗೋಲಗುಮ್ಮಟ ವೀಕ್ಷಣೆಗೆ ದೇಶ ವಿದೇಶಗಳಿಂದ ಲಕ್ಷಾಂತರ ಜನ ಪ್ರವಾಸಿಗರು ಭೇಟಿ ನೀಡಲಿದ್ದಾರೆ. ಇದರೊಂದಿಗೆ ವಿಶ್ವ ದರ್ಜೆಯ ದ್ರಾಕ್ಷಿ ಸೇರಿದಂತೆ ತೋಟಗಾರಿಕೆ ಬೆಳೆ ಬೆಳೆಯುವ ಪ್ರಮುಖ ಕೇಂದ್ರವಾಗಿದ್ದು, ನಿರ್ಮಾಣಗೊಳ್ಳುತ್ತಿರುವ ಉದ್ದೇಶಿತ ಮಿನಿ ವಿಮಾನ ನಿಲ್ದಾಣ ವಿಸ್ತರಿಸಿ ಅಂತರರಾಷ್ಟಿçÃಯ ಮಟ್ಟದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.
ಸದಸ್ಯರ ಸಲಹೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಸೋಮಣ್ಣ ಅವರು ಇದೇ ಡಿಸೆಂಬರ್ ೨೫ ರಂದು ವಿಜಯಪುರಕ್ಕೆ ಭೇಟಿ ನೀಡಿ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ ನಡೆಸಲಿದ್ದೇನೆ. ಉದ್ದೇಶಿತ ವಿಮಾನ ನಿಲ್ದಾಣ ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದೇನೆ.
ಈ ಸಂದರ್ಭದಲ್ಲಿ ತಾಂತ್ರಿಕ ತಂಡವನ್ನು ಸಭೆಗೆ ಆಹ್ವಾನಿಸಿ ಅಂತರರಾಷ್ಟಿçÃಯ ವಿಮಾನ ನಿಲ್ದಾಣವಾಗಿ ವಿಸ್ತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ನಿಟ್ಟಿನಲ್ಲಿ ರಾಯಚೂರು ಹಾಗೂ ಕಾರವಾರ ವಿಮಾನ ನಿಲ್ದಾಣ ಸ್ಥಾಪನೆಗೆ ಪ್ರಸ್ತಾವನೆ ಸ್ವೀಕೃತವಾಗಿದ್ದು, ಶೀಘ್ರವೇ ಈ ಕುರಿತಂತೆ ಮಂಜೂರಾತಿಗೆ ಕ್ರಮವಹಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.


Leave a Reply