Belagavi

ಬೆಂಗಳೂರು ನಗರದಲ್ಲಿಯೇ ೩೮,೮೮೮ ಎಕರೆ ಸರಕಾರಿ ಜಮೀನು ಅತಿಕ್ರಮಣ!, ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಬೆಂಗಳೂರು ನಗರ ಜಿಲ್ಲೆ: ಅತಿಕ್ರಮಿಸಿದ ೧೬೪೨೦ ಎಕರೆ ಜಮೀನು ಸರಕಾರದ ವಶಕ್ಕೆ: ಸಚಿವ ಆರ್.ಅಶೋಕ


ಬೆಳಗಾವಿ ಸುವರ್ಣಸೌಧ,ಡಿ.೧೫: ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಸರಕಾರ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿರುವುದನ್ನು ಎಚ್ಚೆತ್ತಿರುವ ರಾಜ್ಯ ಸರಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ.
ವಿಧಾನಪರಿಷತ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಡಾ.ವೈ.ಎ.ನಾರಾಯಣಸ್ವಾಮಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಸವಿವರವಾಗಿ ಉತ್ತರಿಸಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ೧೪೬೬೦ ಪ್ರಕರಣಗಳಲ್ಲಿ ೩೮,೮೮೮ ಎಕರೆ ಸರಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು,ಬೆAಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ೩೮೫೪೬ ಪ್ರಕರಣಗಳಲ್ಲಿ ೩೬೨೨೯ ಎಕರೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದನ್ನು ವಿವರಿಸಿದ ಸಚಿವ ಅಶೋಕ ಅವರು ಅತಿಕ್ರಮಿಸಲ್ಪಟ್ಟ ಗೋಮಾಳ ಮತ್ತು ಸರಕಾರಿ ಜಮೀನುಗಳ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ೪೯೪೦ ಪ್ರಕರಣಗಳಲ್ಲಿ ೧೬೪೨೦ ಎಕರೆ,ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ೧೦೮೯೨ ಪ್ರಕರಣಗಳಲ್ಲಿ ೧೧೭೭೯ ಎಕರೆ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಬೆಂಗಳೂರು ಡಿಸಿಗೆ ಪ್ರತಿ ಶನಿವಾರ ಒತ್ತುವರಿ ಪ್ರಕರಣಗಳ ಪರಿಶೀಲನೆ ಜವಾಬ್ದಾರಿ: ಸರಕಾರಿ ಜಮೀನುಗಳ ಒತ್ತುವರಿಯನ್ನು ತೆರವುಗೊಳಿಸಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡಿಸಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿರುವುದನ್ನು ಹಾಗೂ ಸಮಿತಿಗಳು ಕಾರ್ಯಪ್ರವೃತ್ತರಾಗಿರುವುದನ್ನು ಸದನದ ಗಮನಕ್ಕೆ ತಂದ ಸಚಿವ ಅಶೋಕ ಅವರು ಬೆಂಗಳೂರು ನಗರದಲ್ಲಿ ಅಪಾರ ಪ್ರಮಾಣದಲ್ಲಿ ಒತ್ತುವರಿಯಾಗಿರುವ ಸರಕಾರಿ ಜಮೀನನ್ನು ವಶಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಪ್ರತಿ ಶನಿವಾರ ಈ ಒತ್ತುವರಿ ಪ್ರಕರಣಗಳ ಪರಿಶೀಲನೆ ಮತ್ತು ವಶಕ್ಕೆ ಪಡೆದುಕೊಳ್ಳುವುದಕ್ಕೆ ಸಂಬAಧಿಸಿದ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದರು.
ರಾಜ್ಯದಲ್ಲಿ ೬೨೭೨೮೧೧ ಎಕರೆ ಸರಕಾರಿ ಜಮೀನು: ರಾಜ್ಯದಲ್ಲಿ ಒಟ್ಟು ೬೨೭೨೮೧೧ ಎಕರೆ ಸರಕಾರಿ ಜಮೀನು ಇದೆ. ಇದರಲ್ಲಿ ಒಟ್ಟು ೧೪೨೭೧೯೫ ಎಕರೆ ಸರಕಾರಿ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಒಟ್ಟು ೯೭೩೨ ಎಕರೆ,ಅಕ್ರಮ-ಸಕ್ರಮ ಯೋಜನೆ ಅಡಿ ಅರ್ಜಿ ಸಲ್ಲಿಸಿದ ೯೯೭೧೯೮ ಎಕರೆ ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ ೧೪೦೪೮ ಎಕರೆ ಸರಕಾರಿ ಜಮೀನು ಹೊರತುಪಡಿಸಿ ೪,೦೬,೨೧೭ ಎಕರೆ ಒತ್ತುವರಿ ಜಮೀನು ತೆರವುಗೊಳಿಸಬೇಕಾಗಿದೆ ಎಂದು ವಿವರಿಸಿದ ಸಚಿವ ಅಶೋಕ ಅವರು ಇದರಲ್ಲಿ ೨೦೨೧ ನವೆಂಬರ್ ೩೦ರವರೆಗೆ ೨,೭೦,೧೦೮ ಎಕರೆ ಸರಕಾರಿ ಜಮೀನು ತೆರವುಗೊಳಿಸಲಾಗಿದೆ. ಉಳಿದಂತೆ ೧೩೬೧೦೯ ಎಕರೆ ಒತ್ತುವರಿ ತೆರವುಗೊಳಿಸಲು ಬಾಕಿ ಇದ್ದು, ಹಂತಹAತವಾಗಿ ತೆರವುಗೊಳಿಸಲು ಕ್ರಮವಹಿಸಲಾಗುವುದು ಎಂದರು.
ಒತ್ತುವರಿ ಪ್ರಕರಣಗಳ ತಡೆಗೆ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸ್ಥಾಪನೆ: ಒತ್ತುವರಿ ಪ್ರಕರಣಗಳನ್ನು ಸಮರ್ಥವಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವನ್ನು ರಚಿಸಲಾಗಿದೆ ಎಂದು ಸಚಿವ ಅಶೋಕ ಅವರು ವಿವರಿಸಿದರು.
ಒತ್ತುವರಿದಾರರ ವಿರುದ್ಧ ಕರ್ನಾಟಕ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ೨೦೮೪೧ ಪ್ರಕರಣಗಳನ್ನು ದಾಖಲಿಸಲಾಗಿದ್ದು ೪೭೧೨ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ೧೬೧೨೯ ಪ್ರಕರಣಗಳು ಬಾಕಿ ಇವೆ. ೬೧ ಜನರಿಗೆ ಒಂದು ವರ್ಷದಂತೆ ಶಿಕ್ಷೆ ವಿಧಿಸಲಾಗಿದೆ ಎಂದರು.


Leave a Reply