Belagavi

ಮೊದಲ ಹಂತದಲ್ಲಿ ಪ್ರಾಥಮಿಕ ಪೂರ್ವ ತರಗತಿಗಳಿಗೆ ಎನ್.ಇ.ಪಿ. ಜಾರಿ-ಸಚಿವ ಬಿ.ಸಿ. ನಾಗೇಶ್


ಬೆಳಗಾವಿ ಸುವರ್ಣಸೌಧ,ಡಿ.೧೬.-ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಪೂರ್ವ ಹಂತದ ತರಗತಿಗಳಿಗೆ ನೂತನ ರಾಷ್ಟಿçÃಯ ಶಿಕ್ಷಣ ನೀತಿ ಅಳವಡಿಸಿಕೊಳ್ಳಲಾಗುವುದು. ಈ ಕುರಿತಂತೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ ಸಚಿವರಾದ ಬಿ.ಸಿ. ನಾಗೇಶ್ ಅವರು ಹೇಳಿದರು.
ವಿಧಾನಸಭಾ ಪ್ರಶ್ನೋತ್ತರ ವೇಳೆಯಲ್ಲಿ ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ ಶಿವಾನಂದ ಇವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ನೂತನ ರಾಷ್ಟಿçÃಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಯಾವುದೇ ಆತುರವಿಲ್ಲ. ಕಾರ್ಯಪಡೆ, ಕೋರ್ ಸಮಿತಿಗಳು ಸೇರಿದಂತೆ ಹಲವು ಸಮಿತಿಗಳನ್ನು ರಚಿಸಲಾಗಿದೆ. ಸುದೀರ್ಘ ಚರ್ಚೆಗಳು, ಸಂವಾದಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಶಿಕ್ಷಣ ಕ್ಷೇತ್ರದ ಪ್ರೊಸಿಷನ್ ಪೇಪರ್ ಸಿದ್ಧಪಡಿಸಲು ರಚಿಸಲಾಗುತ್ತಿದೆ. ನಂತರ ಪಠ್ಯಕ್ರಮ ಮತ್ತು ಪಠ್ಯಸೂಚಿ ರಚಿಸಿ ಹಂತ ಹಂತವಾಗಿ ಹೊಸ ರಾಷ್ಟಿçÃಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು.
ರಾಷ್ಟಿçÃಯ ಶಿಕ್ಷಣ ನೀತಿಯ ಅನ್ವಯ ಪಠ್ಯಕ್ರಮ, ಬೋಧಕರ ನೇಮಕಾತಿ, ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪ್ರಾಥಮಿಕ ಪೂರ್ವ ಹಂತದ ಆಯ್ದ ಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಉದ್ದೇಶ ಹೊಂದಲಾಗಿದೆ. ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಈ ಹಂತದ ತರಗತಿಗಳಿಗೆ ಮೊದಲ ಹಂತದಲ್ಲಿ ಹೊಸ ಶಿಕ್ಷಣ ನೀತಿಯನ್ನು ಅಳವಡಿಸಲಾಗುವುದು. ಅಂಗನವಾಡಿ ಶಿಕ್ಷಕಿಯರನ್ನು ಈ ತರಗತಿಗಳಿಗೆ ಬಳಸಿಕೊಳ್ಳಲು ಚಿಂತನೆ ನಡೆಸಿದೆ. ಇವರಿಗೆ ಅಗತ್ಯ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ ತರಬೇತಿ ನೀಡದೇ ಹೊಸ ನೀತಿ ಅಳವಡಿಸುವುದಿಲ್ಲ. ರಾಷ್ಟಿçÃಯ ಶಿಕ್ಷಣ ನೀತಿಯ ಅನು:ಪಾತದಂತೆ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.
ಹುದ್ದೆ ಭರ್ತಿಗೆ ಕ್ರಮ: ಪ್ರಸ್ತುತ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ೪೧,೮೬೯ ಪ್ರೌಢಶಾಲೆಗಳಲ್ಲಿ ೮,೨೯೨ ಪದವಿಪೂರ್ವ ಶಿಕ್ಷಣ ಇಲಾಖೆಗಳಲ್ಲಿ ೩,೫೩೯ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲೆಗಳಲ್ಲಿ ೧೮,೦೦೦ ಹಾಗೂ ಪ್ರೌಢಶಾಲೆಗಳಲ್ಲಿ ೫,೦೭೮ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಖಾಲಿ ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮವಹಿಸಲಾಗಿದೆ. ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ೧೫,೦೦೦ ಶಿಕ್ಷಕರ ಹುದ್ದೆ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳ ಪೈಕಿ ೨,೫೩೯ ಹುದ್ದೆಗಳನ್ನು ಬಡ್ತಿ ಕಾಯ್ದಿರಿಸಿದೆ. ಉಳಿದ ೨,೫೩೯ ಹುದ್ದೆಗಳ ನೇರ ನೇಮಕಾತಿ ಇದರೊಂದಿಗೆ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.


Leave a Reply