Belagavi

ಮರಾಠಾ ಅಭಿವೃದ್ಧಿ ನಿಗಮಕ್ಕೆ ಶೀಘ್ರವೇ ಅಧ್ಯಕ್ಷರ ನೇಮಕ: ಸಚಿವ ಆರ್. ಅಶೋಕ


ಬೆಳಗಾವಿ ಸುವರ್ಣಸೌಧ,ಡಿ.೧೬: ನೂತನವಾಗಿ ರಚಿಸಲಾದ ಮರಾಠಾ ಅಭಿವೃದ್ಧಿ ನಿಗಮಕ್ಕೆ ಶೀಘ್ರವೇ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಲಾಗುವುದೆಂದು ಕಂದಾಯ ಸಚಿವರಾದ ಆರ್. ಅಶೋಕ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.
ಶಾಸಕ ಬಸವರಾಜ ಪಾಟೀಲ ಯತ್ನಾಳ ಅವರು ಶೂನ್ಯ ವೇಳೆಯಲ್ಲಿ ಮರಾಠಾ ಅಭಿವೃದ್ಧಿ ನಿಗಮಕ್ಕೆ ಪದಾಧಿಕಾರಿಗಳ ನೇಮಕದ ವಿಳಂಬ, ಅನುದಾನ ಬಿಡುಗಡೆ ಹಾಗೂ ಮೀಸಲಾತಿ ಕಲ್ಪಿಸಲು ಗಮನ ಸೆಳೆದರು. ಈ ಕುರಿತು ಸ್ಪಷ್ಟನೆ ನೀಡಿದ ಸಚಿವ ಆರ್. ಅಶೋಕ ಅವರು ಮರಾಠಾ ಅಭಿವೃದ್ಧಿ ನಿಗಮ ಒಂದು ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ರಚಿಸಲಾಗಿದೆ. ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಮರಾಠಾ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ವಿಳಂಬವಾಗಿದ್ದು, ಈಗಾಗಲೇ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕಾತಿ ಕುರಿತಂತೆ ಚರ್ಚಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಪದಾಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗುವುದು. ಈಗಾಗಲೇ ನಿಗಮಕ್ಕೆ ೫೦ ಕೋಟಿ ರೂ. ಅನುದಾನ ನೀಡಲಾಗಿದೆ. ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ನಿಗಮದ ಚಟುವಟಿಕೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದೆಂದು ತಿಳಿಸಿದರು.


Leave a Reply