Belagavi

ಶಿಕ್ಷಣ ಸಚಿವರ ಕಾಲಿಗೆ ಬಿದ್ದ ಅತಿಥಿ ಉಪನ್ಯಾಸಕಿ


ಬೆಳಗಾವಿ : ಸುವರ್ಣಸೌಧ ಆವರಣದ ಸುವರ್ಣಾ ಗಾರ್ಡನ್‍ನಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಖಾಸಗಿ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಶಿಕ್ಷಕಿಯೋರ್ವರು ಪ್ರಾಥಮಿಕ ಶಿಕ್ಷಣ ಸಚಿವರ ಕಾಲಿಗೆ ಬಿದ್ದು ಮನವಿ ಮಾಡಿದ್ದಾರೆ.ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಖಾಸಗಿ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸುವರ್ಣ ಗಾರ್ಡ್‍ನ್‍ನಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರಾಥಮಿಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರ ಅಹವಾಲುಗಳನ್ನು ಕೇಳಲು ಮುಂದಾಗಿದ್ದರು. ಈ ವೇಳೆ ಪ್ರಾಥಮಿಕ ಶಲಾ ಶಿಕ್ಷಕಿಯೋರ್ವರು ತಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕೆಂದು ಬಿಸಿ ನಾಗೇಶ್ ರವರ ಕಾಲಿಗೆ ಬಿದ್ದು ಮನವಿ ಮಾಡಿದರು.


Leave a Reply