Belagavi

ಅಧಿವೇಶನಕ್ಕೆ ಆಗಮಿಸದ ಎಚ್.ಡಿ.ಕೆ, ಕಾರಣವೇನು..?


ಬೆಳಗಾವಿ : ಚಳಿಗಾಲದ ಅಧಿವೇಶನ ಆರಂಭವಾಗಿ ಐದು ದಿನ ಕಳೆದರೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆಗೆ ಆಗಮಿಸಿಯೇ ಇಲ್ಲ. ಸುವರ್ಣ ವಿಧಾನಸೌಧದಲ್ಲಿ ಕಳೆದ ಸೋಮವಾರದಿಂದಲೂ ಅಧಿವೇಶನ ನಡೆಯುತ್ತಿದೆ.

ವಾರ ಕಳೆಯುತ್ತಾ ಬಂದರೂ ಒಂದೂ ದಿನವೂ ಕುಮಾರಸ್ವಾಮಿಯವರು ಸದನದಲ್ಲಿ ಪಾಲ್ಗೊಂಡಿಲ್ಲ.ದೆಹಲಿ ಪ್ರವಾಸದಲ್ಲಿರುವ ಕುಮಾರಸ್ವಾಮಿ ಮುಂದಿನ ವಾರದಿಂದ ವಿಧಾನಸಭೆಯ ಕಾರ್ಯಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಕಳೆದ ಸೋಮವಾರ ನವದೆಹಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದರು.

ಅಂದಿನಿಂದಲೂ ದೆಹಲಿಯಲ್ಲಿ ಬೀಡು ಬಿಟ್ಟಿರುವ ಅವರು, ನಾಳೆ ರಾಜ್ಯಕ್ಕೆ ಮರಳುವ ನಿರೀಕ್ಷೆಯಿದೆ. ಮುಂದಿನ ಸೋಮವಾರದಿಂದ ಅಧಿವೇಶನದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.


Leave a Reply