Belagavi

ಗ್ರಾಮ ಪಂಚಾಯಿತಿ ಪಿಡಿಓಗೆ ಕೇಂದ್ರ ಸ್ಥಾನದಲ್ಲೇ ಮನೆ : ಸಚಿವ ಈಶ್ವಪ್ಪ


ಬೆಳಗಾವಿ : ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ವಾಸಕ್ಕೆ ಅನುಕೂಲವಾಗುವಂತೆ ವಸತಿ ಗೃಹ ನಿರ್ಮಿಸುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವಪ್ಪ ವಿಧಾನಪರಿಷತ್‍ಗೆ ತಿಳಿಸಿದರು.

ಸದಸ್ಯ ಡಾ.ತಳವಾರ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸುವಾಗ ಮಧ್ಯಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಪಂಚಾಯಿತಿಗಳಲ್ಲೇ ವಾಸವಿರುವಂತೆ ವಸತಿ ಗೃಹ ಕಟ್ಟಿಸಿಕೊಡಿ ಎಂಬ ಸಲಹೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿ ಪಂಚಾಯ್ತಿಗಳ ಕೇಂದ್ರ ಸ್ಥಾನದಲ್ಲೇ ಮನೆ ಕಟ್ಟಿಸಿಕೊಡುವ ಕೆಲಸ ಮಾಡಲಾಗುವುದು ಎಂದರು.


Leave a Reply