Belagavi

ಭಿಕ್ಷಾಟನೆ ನಿರ್ಮೂಲನೆಗೆ ಕಠಿಣ ಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ


ಬೆಳಗಾವಿ ಸುವರ್ಣಸೌಧ,ಡಿ.೧೭: ರಾಜ್ಯದಲ್ಲಿ ಭಿಕ್ಷಾಟನೆಯ ಹೆಸರಿನಲ್ಲಿ ಹಲವು ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಸರಕಾರದ ಗಮನಕ್ಕೆ ಬಂದಿದ್ದು, ಈ ಭಿಕ್ಷಾಟನೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಧಿವೇಶನದ ಮುಗಿದ ವಾರದೊಳಗೆ ವಿಶೇಷ ಸಭೆ ಕರೆದು ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಸದಸ್ಯ ಗೋವಿಂದರಾಜು ಅವರು ಚುಕ್ಕೆ ಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಈ ವಿಷಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ಗೃಹ ಇಲಾಖೆ ಮತ್ತು ಸಮಾಜಕಲ್ಯಾಣ ಇಲಾಖೆ ಪಾತ್ರ ಪ್ರಮುಖವಾಗಿದೆ ಎಂದರು.
ಒಳಾಡಳಿತ ಇಲಾಖೆಯಿಂದ ರಾಜ್ಯದಲ್ಲಿ ಒಟ್ಟಾರೆ ೩೦ ಮಾನವ ಕಳ್ಳ ಸಾಗಾಣಿಕೆ ನಿಷೇಧ ಘಟಕಗಳನ್ನು ಸ್ಥಾಪಿಸಿದ್ದು ಕಾಣೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದ ಸಚಿವ ಕೋಟ ಅವರು ಭಿಕ್ಷಾಟನೆ ಹೆಸರಿನಲ್ಲಿ ಮಕ್ಕಳನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿರುವ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.


Leave a Reply