Belagavi

ಕೇಂದ್ರ ಸರ್ಕಾರದ ವಿರುದ್ಧ ಯೂಥ್ ಕಾಂಗ್ರೆಸ್ ಪ್ರತಿಭಟನೆ


ಬೆಳಗಾವಿ : ಕೇಂದ್ರ ಸರಕಾರ ದೇಶದ ಯುವಕರಿಗೆ ವರ್ಷಕ್ಕೆ ಎರಡು ಕೋಟಿ‌ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಇಲ್ಲಿಯವರೆಗೂ ಉದ್ಯೋಗ ಸೃಷ್ಟಿ ಮಾಡದಿರುವುದನ್ನು ಖಂಡಿಸಿ ಶುಕ್ರವಾರ ಯುಥ್ ಕಾಂಗ್ರೆಸ್ ಘಟಕ ಬೆಳಗಾವಿ ನಗರದಿಂದ ಬೈಕ್ ರ್ಯಾಲಿ‌ ನಡೆಸಿ ಸುವರ್ಣ ವಿಧಾನ‌ ಸೌಧದ ಗಾಡ್೯ನ‌ ಬಳಿ ಪ್ರತಿಭಟನೆ ನಡೆಸಿ‌ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ‌ಮೋದಿ ನೇತೃತ್ವದ‌ ಸರಕಾರ‌ ಬಂದ ಬಳಿಕ ದೇಶದಲ್ಲಿರುವ ಯವಕರಿಗೆ ಪ್ರತಿ‌ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು.‌ ಉದ್ಯೋಗ ಸೃಷ್ಟಿ ಮಾಡುವುದು ಹೋಗಲು ಕರೊನಾ ಹೆಮ್ಮಾರಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಜನರು ಇರುವ ಉದ್ಯೋಗ ಕಳೆದುಕೊಂಡು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹ್ಮದ ನಡಪಾಳ, ಕಾಂಗ್ರೆಸ್ ಯುವ ನಾಯಕ ಮೃಣಾಲ್‌ ಹೆಬ್ಬಾಳ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Leave a Reply