Belagavi

ಶೀಘ್ರವೇ 2,318 ಗ್ರಾ.ಪಂ. ಪಿಡಿಒ, ಕಾರ್ಯದರ್ಶಿಗಳ ಹುದ್ದೆಗಳ ನೇಮಕಾತಿ


ಬೆಳಗಾವಿ : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಶೀಘ್ರವೇ ರಾಜ್ಯದಲ್ಲಿ 2,318 ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ 2,318 ಹುದ್ದೆಗಳು ಖಾಲಿ ಇವೆ. 727 ಪಿಡಿಒಗಳು, 635 ಕಾರ್ಯದರ್ಶಿ ಗ್ರೇಡ್-1 ಮತ್ತು 856 ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳ ಖಾಲಿ ಇವೆ.

ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಾಗಿದೆ. ಕೆಲವು ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.


Leave a Reply