Belagavi

ಬೆಳಗಾವಿಯಲ್ಲಿ ಹಿಂಸಾಚಾರ ಪ್ರಕರಣ : 27 ಜನರ ಅರೆಸ್ಟ್


ಬೆಳಗಾವಿ: ನಗರದಲ್ಲಿ ತಡರಾತ್ರಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಪ್ರಕರಣ ದಾಖಲಾಗಿದ್ದು, ಇಲ್ಲಿವರೆಗೆಗೆ 27 ಜನರನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದಿರುವ ಘಟನೆಯನ್ನು ನೆಪವಾಗಿಸಿಕೊಂಡು ಮಹಾರಾಷ್ಟ್ರ ಏಕೀಕರಣ ಸಮಿತಿ, ಶಿವಸೇನೆ ನೇತೃತ್ವದಲ್ಲಿ ಪುಂಢರು ಸಂಭಾಜಿ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಿದ್ದರು.

ಈ ಸಂಬಂಧ ಖಡೇಬಜಾರ್, ಕ್ಯಾಂಪ್ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈವರೆಗೆ 27 ಜನರನ್ನು ಬಂಧಿಸಲಾಗಿದ್ದು, ಇನ್ನೂ ಬಂಧನ ಪ್ರಕ್ರಿಯೆ ಮುಂದುವರಿದಿದೆ.

ಬೆಳಗಾವಿ ತಾಲೂಕಿನಾದ್ಯಂತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಮಧ್ಯೆ ಆನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನ ಮಾಡಲಾಗಿದ್ದು, ಈ ಸಂಬಂಧ ಕೂಡ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇನ್ನುಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದ ಇಂದು ಬೆಳಗ್ಗೆ 10.30ಕ್ಕೆ ಪ್ರತಿಭಟನೆ ನಡೆಸಲಿದ್ದಾರೆ.


Leave a Reply