Ballarykaranataka

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ : ಸಿಎಂ ಬೊಮ್ಮಾಯಿ ಹೇಳಿದ್ದೇನು?


ಹುಬ್ಬಳ್ಳಿ : ಬೆಳಗಾವಿಯಲ್ಲಿ ಕಳೆದ ರಾತ್ರಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ವಿಕೃತಿ ಮೆರೆದಿರುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಷ್ಟ್ರಭಕ್ತರ ಪ್ರತಿಮೆ ಧ್ವಂಸಗೊಳಿಸಿದ್ದು ಸರಿಯಲ್ಲ. ಕೆಲವೇ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಅವರನ್ನು ಸದೆಬಡಿಯುತ್ತೇವೆ ಎಂದರು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚನೆ ನೀಡಿದ್ದೇನೆ.ಬೆಳಗಾವಿಯಲ್ಲಿ ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಮಹಾನ್ ನಾಯಕರನ್ನು ಅಪಮಾನಿಸುವುದು ಸರಿಯಲ್ಲ . ಸಮಾಜಲದಲ್ಲಿ ಗಲಭೆ ಉಂಟಾ ಮಾಡುವು ಸರಿಯಲ್ಲ, ಗಲಭೆಯ ಹಿಂದೆ ಹಲವಾರು ಕಾರಣಗಳಿವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ.

 


Leave a Reply