Belagavi

ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ : ಮಾಜಿ ಸಿಎಂ ಸಿದ್ದರಾಮಯ್ಯ


ಬೆಳಗಾವಿ : ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬಸವರಾಜಬೊಮ್ಮಾಯಿ ಅವರು, ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರೇ ಇದಕ್ಕೆಲ್ಲ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ,‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌ ಮನವಿ ಮಾಡಿದ್ದಾರೆ.


Leave a Reply