Belagavi

ಕನ್ನಡ ಧ್ವಜಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟ ಕಾಂಗ್ರೆಸ್ ಕಾರ್ಯಕರ್ತರು


ಬೆಳಗಾವಿ: ಕನ್ನಡಿಗರ ಆಕ್ರೋಶಕ್ಕೆ ಈಗ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಕನ್ನಡ ಧ್ವಜಕ್ಕೆ ಅವಮಾನ ಮಾಡುವುದನ್ನು ಮಹಾರಾಷ್ಟ್ರದಲ್ಲಿ ಕಿಡಿಗೇಡಿಗಳು ಮುಂದುವರಿಸಿದ್ಸು, ಕೊಲ್ಲಾಪುರದ ಕಾಂಗ್ರೆಸ್ ಕಾರ್ಯಕರ್ತರು ಕನ್ನಡ ಬಾವುಟ ಮೇಲೆ ನಾಯಿ ಮಲಗಿಸಿ, ಚಪ್ಪಲಿಯಿಂದ ಹೊಡೆದು, ಕಪ್ಪು ಮಸಿ ಸುರಿದು ಬಾವುಟ ಸುಟ್ಟು ಕನ್ನಡಿಗರನ್ನು ಕೆಣಕಿದ್ದಾರೆ.

ಕಳೆದ ವಾರವೂ ಶಿವಸೇನೆಯವರು ಕನ್ನಡ ಬಾವುಟ ಸುಟ್ಟಿದ್ದರು. ಈಗ ಕಾಂಗ್ರೆಸ್ ಕಾರ್ಯಕರ್ತರು ಕನ್ನಡಿಗರನ್ನು ಗುರಿಯಾಗಿಸಿಕೊಂಡು ಧ್ವಜಕ್ಕೆ ಅವಮಾನ ಮಾಡಿ ಈ ಕೃತ್ಯ ಎಸಗುತ್ತಿದ್ದಾರೆ.


Leave a Reply