Belagavi

ಆರ್ಥಿಕ ನಿರ್ಬಂಧ ತೆರವಿನ ನಂತರ ವಿಶ್ವವಿದ್ಯಾಲಯಗಳ ನೇಮಕಾತಿ ಕ್ರಮ; ಸಚಿವ ಅಶ್ವಥ್ ನಾರಾಯಣ


ಬೆಳಗಾವಿ ಸುವರ್ಣಸೌಧ ಡಿ. ೨೦: ಆರ್ಥಿಕ ಇಲಾಖೆ ನೇಮಕಾತಿ ಪ್ರಕ್ರಿಯೆಗಳಿಗೆ ನಿರ್ಬಂಧ ವಿಧಿಸಿದೆ. ಈ ನಿರ್ಬಂಧದನ್ವಯ ಕಲ್ಯಾಣ ಕರ್ನಾಟಕ ಪ್ರದೇಶಗಳನ್ನು ಹೊರತು ಪಡಿಸಿ, ಬೇರೆ ವಿಭಾಗಗಳ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲಾಗಿದೆ. ಆರ್ಥಿಕ ಇಲಾಖೆಯ ನಿರ್ಬಂಧ ತೆರವಿನ ನಂತರ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ ಹಾಗೂ ಬೋಧÀಕೇತರ ಸಿಬ್ಬಂದಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ, ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಉದ್ದಮಶೀಲತೆ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿಯವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಒಟ್ಟು ೨೩ ವಿಶ್ವವಿದ್ಯಾಲಯಗಳು ಸರ್ಕಾರದ ಅನುದಾನದಲ್ಲಿ ಸ್ಥಾಪಿಸಲ್ಪಟ್ಟಿವೆ. ಒಟ್ಟು ೪೧೫೮ ಬೋಧಕ, ೮೪೪೭ ಬೋಧಕೇತರ ಸಿಬ್ಬಂದಿ ಹುದ್ದೆಗಳು ಮಂಜೂರಾಗಿವೆ. ೨೨೬೬ ಬೋಧಕ ಹಾಗೂ ೫೧೩೮ ಬೋಧಕೇತರ ಹುದ್ದೆಗಳು ಖಾಲಿಯಿವೆ. ವಿಶ್ವ ವಿದ್ಯಾಲಯಗಳಲ್ಲಿ ಅತಿಥಿ/ತಾತ್ಕಾಲಿಕ ಉಪನ್ಯಾಸಕರನ್ನು ನೇಮಿಸಿಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ನೆಡೆಸಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ೨೦೧೯ರಲ್ಲಿ ಬೋಧಕ ಹುದ್ದೆಗಳ ನೇರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ವಿಶ್ವವಿದ್ಯಾಲಯಗಳ ಪರಿನಿಯಮಾವಳಿಗಳನ್ವಯ ವೃಂದ ಮತ್ತು ನೇಮಕಾತಿ ನಿಯಮಾನುಸಾರ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ವನ್ಯಜೀವಿ ಸಂರಕ್ಷಣೆಗೆ ೩೮೬ ಕೋಟಿ ರೂಪಾಯಿ ವೆಚ್ಚ: ಸಚಿವ ಉಮೇಶ್ ಕತ್ತಿ ಬೆಳಗಾವಿ ಸುವರ್ಣಸೌಧ (ಕರ್ನಾಟಕ ವಾರ್ತೆ) ಡಿ. ೨೦: ರಾಜ್ಯದಲ್ಲಿ ವನ್ಯಜೀವಿಗಳ ಸಂರಕ್ಷಣೆಗೆ ಕಳೆದ ಎರಡು ವರ್ಷಗಳಲ್ಲಿ ಒಟ್ಟು ೩೮೬ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ ಎಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಕಾರಗಳ ಸಚಿವ ಉಮೇಶ್ ವಿ ಕತ್ತಿ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಅವರು ಅರಣ್ಯ ಇಲಾಖೆಯ ವನ್ಯಜೀವಿಗಳ ಸಂರಕ್ಷಣೆಗೆ ಕಟ್ಟುನಿಟ್ಟಿನ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗಿದೆ. ಆನೆ, ಹುಲಿ, ಚಿರತೆ ಮುಂತಾದ ವನ್ಯಪ್ರಾಣಿಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗಿದೆ. ೨೦೧೭ರ ಆನೆ ಗಣತಿಯಂತೆ ೬೦೪೯ ಆನೆಗಳು, ೨೦೧೮ರ ಹುಲಿಗಣತಿಯಂತೆ ೫೨೪ ಹುಲಿಗಳು ರಾಜ್ಯದ ಅಭಯಾರಣ್ಯಗಳಲ್ಲಿವೆ. ಅರೇಬಿಯನ್ ಸಮುದ್ರದ ಹಂಪ್ ಬ್ಯಾಕ್ ತಿಮಿಂಗಲ, ಪಕ್ಷಿ ಪ್ರಬೇಧಗಳಾದ ಗ್ರೇಟ್ ಇಂಡಿಯನ್ ಬಸ್ಟರ್ಡ್, ಲೆಸ್ಸರ್ ಫ್ಲೋರಿಕಾನ್, ರಣ ಹದ್ದು ಸಂರಕ್ಷಣೆಗೂ ಯೋಜನೆ ರೂಪಿಸಲಾಗಿದೆ.
೨೦೧೯-೨೦ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ೬೩.೭೨ ಕೋಟಿ ಹಾಗೂ ೨೦೨೦-೨೧ನೇ ಸಾಲಿನಲ್ಲಿ ೬೬.೨೧ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ರಾಜ್ಯ ಸರ್ಕಾರ ೨೦೧೯-೨೦ ನೇ ಸಾಲಿನಲ್ಲಿ ೧೩೯ ಕೋಟಿ ಹಾಗೂ ೨೦೨೦-೨೧ನೇ ಸಾಲಿನಲ್ಲಿ ೧೨೨ ಕೋಟಿ ರೂಪಾಯಿಗಳನ್ನು ವನ್ಯಜೀವಿ ಸಂರಕ್ಷಣೆಗಾಗಿ ಬಿಡುಗಡೆ ಮಾಡಲಾಗಿದೆ. ಒಟ್ಟು ೩೮೬ ಕೋಟಿ ರೂಪಾಯಿಗಳನ್ನು ಕಳೆದ ಎರಡು ವರ್ಷಗಳಲ್ಲಿ ವ್ಯಯ ಮಾಡಲಾಗಿದೆ.
ರಾಜ್ಯದಲ್ಲಿ ೫ ರಾಷ್ಟಿçÃಯ ಉದ್ಯಾನವನ, ೩೩ ಅಭಿಯಾರಣ್ಯ , ೧೪ ಸಂರಕ್ಷಣಾ ಮೀಸಲು ಪ್ರದೇಶ ಹಾಗೂ ೧ ಸಮುದಾಯ ಮೀಸಲು ಪ್ರದೇಶವನ್ನು ವನ್ಯಜೀವಿಗಳ ಸಂರಕ್ಷಣೆಗಾಗಿ ಮೀಸರಿಸಲಾಗಿದೆ.
ವನ್ಯಜೀವಿಗಳಿಗೆ ನೀರಿನ ಸೌಕರ್ಯ, ಆವಾಸ ಅಭಿವೃದ್ಧಿ, ಅರಣ್ಯಗಳಲ್ಲಿನ ಕೆರೆಗಳ ಹೂಳುಎತ್ತುವಿಕೆ, ಚೆಕ್ ಡ್ಯಾಂ ನಿರ್ಮಾಣ, ನಾಲಾ ಅಭಿವೃದ್ಧಿ, ಸೌರ್ಯಬೇಲಿ, ಆನೆ ತಡೆಕಂದಕಗಳನ್ನು ನಿರ್ಮಾಣ ಕಾಮಗಾರಿಗಳನ್ನು ರಕ್ಷಿತಾ ಅರಣ್ಯಗಳಲ್ಲಿ ಕೈಗೊಳ್ಳಲಾಗಿದೆ.
ಕಾವಲು ಸಿಬ್ಬಂದಿಗಳನ್ನು ನೇಮಿಸಿ ಕಳ್ಳ ಬೇಟೆ ತಡೆಯಲಾಗುತ್ತಿದೆ. ಅಭ್ಯಯಾರಣ್ಯಗಳಲ್ಲಿ ಸಂಭವಿಸುವ ಕಾಡ್ಗಿಚ್ಚು ನಂದಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಉಮೇಶ ಕತ್ತಿ ಅವರು ತಿಳಿಸಿದ್ದಾರೆ.


Leave a Reply