Belagavi

ಬಸವೇಶ್ವರ ಮೂರ್ತಿಗೆ ಅವಮಾನ ಮಾಡಿದ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು


ಬೆಳಗಾವಿ: ಸಂಗೊಳ್ಳಿ ರಾಯಣ್ಣಾ ಮೂರ್ತಿಗೆ ಅಪಮಾನ ಮಾಡಿ ಬೆನ್ನಲ್ಲೆ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನ ಮಾಡಿದ ಘಟನೆಗೆ ಸಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಚಿನ್ ಓಮಣ್ಣ ಗುರವ್, ಸಂಜು ಓಮಣ್ಣ ಗುರವ್ ಮತ್ತು ಗಣೇಶ ಕೃಷ್ಣಾಜಿ ಪೆಡ್ನೇಕರ್ ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಗ್ರಾಮದ ಬಸವೇಶ್ವರ ವೃತ್ತದ ಬಸವೇಶ್ವರ ಭಾವಚಿತ್ರಕ್ಕೆ ಸೆಗಣಿ ಎರಚಿದ ದುಷ್ಕರ್ಮಿಗಳು ವೃತ್ತದಲ್ಲಿ ಅಳವಡಿಸಿದ್ದ ಬಸವೇಶ್ವರ ವೃತ್ತ ಕನ್ನಡ ನಾಮಫಲಕಕ್ಕೆ ಮಸಿ ಬಳಿದಿದ್ದರು. ಜೊತೆಗೆ ಗ್ರಾಮ ಪಂಚಾಯತಿ ಆವರಣದಲ್ಲಿದ್ದ ಕನ್ನಡ ಬಾವುಟವನ್ನು ಕಿತ್ತುಹಾಕಿದ್ದರು. ಘಟನೆಗೆ ಸಂಬಂಧಿಸಿದಂತೆ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಳಗಾವಿಯಲ್ಲಿ ವಿಧಾನ ಮಂಡಳದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ನಡೆದ ಈ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅಧಿವೇಶನದಲ್ಲೂ ವಿಷಯ ಪ್ರಸ್ತಾಪವಾಗಿತ್ತು.


Leave a Reply