Belagavi

ಮಹಿಳೆಯರ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಕ್ರಮ: ಸಚಿವ ಆಚಾರ ಹಾಲಪ್ಪ


ಬೆಳಗಾವಿ ಸುವರ್ಣಸೌಧ,ಡಿ.೨೧: ಕಳೆದ ಮೂರು ವರ್ಷಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ ೯೧೫ ಪ್ರಕರಣಗಳು ಮಹಿಳೆಯರ ಮೇಲೆ ದೌರ್ಜನ್ಯ ಕುರಿತಂತೆ ೭೩೦೪ ಪ್ರಕರಣಗಳು ದಾಖಲಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಆಚಾರ ಹಾಲಪ್ಪ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಸೇರಿದಂತೆ ಕಳೆದ ೩ ವರ್ಷಗಳಲ್ಲಿ ರಾಜ್ಯದಲ್ಲಿ ೭೩೦೪ ಪ್ರಕರಣಗಳು ಕರ್ನಾಟಕ ರಾಜ್ಯ ಮಹಿಳಾ ಆಯೋಗದಲ್ಲಿ ದಾಖಲಾಗಿವೆ. ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ ೯೧೫ ಪ್ರಕರಣಗಳು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ದಾಖಲಾಗಿರುವುದಾಗಿ ಮಾಹಿತಿ ಒದಗಿಸಿದ್ದಾರೆ.
ರಾಜ್ಯದಲ್ಲಿ ೨೦೧೮ರಿಂದ ೨೦೨೧ ರವರೆಗೆ ೧೯೬೮ ಅತ್ಯಾಚಾರ ಪ್ರಕರಣಗಳು, ೧೮,೭೧೪ ಲೈಂಗಿಕ ದೌರ್ಜನ್ಯ ಪ್ರಕರಣಗಳು, ೭೧೩ ವರದಕ್ಷಣೆ ಸಾವು ಪ್ರಕರಣಗಳು, ೬೫೪೨ ವರದಕ್ಷಿಣೆ ಕುರುಕುಳ ಪ್ರಕರಣಗಳು ಹಾಗೂ ೮೬೦೯ ಗಂಡ ಹಾಗೂ ಗಂಡನ ಮನೆಯವರಿಂದ ಕಿರುಕುಳ ಎಸಗಿದ ಪ್ರಕರಣಗಳು ದಾಖಲಾಗಿವೆ. ಒಳಾಡಳಿತ ಇಲಾಖೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬAಧಿಸಿದAತೆ ೨೦೧೮ ರಿಂದ ೨೦೨೧ರ ಅವಧಿಯಲ್ಲಿ ಜೆ.ಜೆ. ಆ್ಯಕ್ಟ್ ನಡಿ ೨೦೫ ಪ್ರಕರಣಗಳು, ಬಾಲ್ಯ ವಿವಾಹ ಕಾಯ್ದೆಯಡಿ ೫೮೫ ಪ್ರಕರಣಗಳು, ಬಾಲಕಾರ್ಮಿಕ ಪದ್ಧತಿ ಕಾಯ್ದೆ ಉಲ್ಲಂಘನೆಯಡಿ ೨೪೯ ಪ್ರಕರಣಗಳು, ಮಕ್ಕಳ ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ೨೫೧೦ ಪ್ರಕರಣಗಳು ಹಾಗೂ ೬೩೫೮ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿರುವ ಕುರಿತು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಮಹಿಳೆಯರ ಮೇಲಿನ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಕ್ರಮವಹಿಸುತ್ತಿದೆ. ದೌರ್ಜನ್ಯಕ್ಕೊಳಗಾಗ ಎಲ್ಲಾ ಪ್ರಕರಣಗಳಿಗೆ ಒಳಾಡಳಿತ ಇಲಾಖೆಯಿಂದ ಆರ್ಥಿಕ ಪರಿಹಾರವನ್ನು ನೀಡಲಾಗುತ್ತಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕ್ರಮಕೈಗೊಳ್ಳುತ್ತಿದೆ. ಬಾಲನ್ಯಾಯ ಕಾಯ್ದೆ ೨೦೧೫, ಬಾಲ ನ್ಯಾಯ ನಿಯಮ ೨೦೧೬, ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯ್ದೆ ೨೦೧೨ ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ನಿಯಮ ೨೦೨೦, ಮಕ್ಕಳ ರಕ್ಷಣೆ ಹಾಗೂ ಹಕ್ಕುಗಳ ಕಾಯಿದೆ ೨೦೦೫, ಬಾಲಕಾರ್ಮಿಕ ನಿಷೇಧ ಕಾಯ್ದೆ ೨೦೦೬ ಹಾಗೂ ಬಾಲ್ಯ ವಿವಾಹ ನಿಷೇಧ ನಿಯಮ ೨೦೧೬ ಹಾಗೂ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಮಾರ್ಗಸೂಚಿ ೨೦೧೪ರನ್ವಯ ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಕುರಿತಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ಒದಗಿಸಿದ್ದಾರೆ.
ಮಕ್ಕಳ ರಕ್ಷಣೆಗಾಗಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಮಾನ್ಯ ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆ, ಬಾಲಹಿತೈಷಿ ಯೋಜನೆ, ಉಪಕಾರ್ ಯೋಜನೆ ಮತ್ತು ವಿಶೇಷ ಪಾಲನಾ ಯೋಜನೆ ಹಾಗೂ ಪ್ರಯೋಜಕತ್ವ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಹಾಗೂ ಕಲ್ಯಾಣಕ್ಕಾಗಿ ಸರ್ಕಾರ ಆದ್ಯತೆ ನೀಡಿದೆ ಎಂದು ಉತ್ತರಿಸಿದ್ದಾರೆ.


Leave a Reply