Belagavi

ನಷ್ಟದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಪುನ:ಶ್ಚೇತನಕ್ಕೆ ಕ್ರಮ: ಸಚಿವ ನಾಗರಾಜು


ಬೆಳಗಾವಿ ಸುವರ್ಣಸೌಧ,ಡಿ.೨೧: ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಪುನ:ಶ್ಚೇತನಕ್ಕೆ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಪೌರಾಡಳಿತ ಮತ್ತು ಸಣ್ಣಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್. ನಾಗರಾಜು ಎಂ.ಟಿ.ಬಿ. ಅವರು ತಿಳಿಸಿದ್ದಾರೆ.
ಸದಸ್ಯ ಪ್ರಕಾಶ ರಾಠೋಡ ಅವರ ಪ್ರಶ್ನೆಗೆ ಉತ್ತರ ನೀಡಿರುವ ಅವರು ರಾಜ್ಯದಲ್ಲಿ ೬೦ ಸಾರ್ವಜನಿಕ ಉದ್ದಿಮೆಗಳಿವೆ. ಈ ಉದ್ಯಮಗಳಲ್ಲಿ ೧,೯೪,೪೩೯ ಜನ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ೨೧ ಸಾರ್ವಜನಿಕ ಉದ್ದಿಮೆಗಳು ನಷ್ಟದಲ್ಲಿವೆ. ಸಾರ್ವಜನಿಕ ಸಾರಿಗೆ, ವಿದ್ಯುತ್ ಪ್ರಸರಣ, ನೀರಾವರಿ, ಮೂಲಭೂತ ಸೌಲಭ್ಯ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಕ್ಷೇತ್ರದ ಉದ್ದಿಮೆಗಳು ನಷ್ಟದಲ್ಲಿವೆ. ಈ ಉದ್ದಿಮೆಗಳ ಪುನ:ಶ್ಚೇತನಕ್ಕೆ ಸಂಬAಧಪಟ್ಟ ಆಡಳಿತ ಇಲಾಖೆಗಳು ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿವೆ. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಮೂಖಾಂತರ ನಷ್ಟದಲ್ಲಿರುವ ಉದ್ದಿಮೆಗಳ ಮೌಲ್ಯಮಾಪನ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕ ಉದ್ದಿಮೆಗಳ ಅಧಿಕಾರಿ ಹಾಗೂ ನೌಕರರ ವರ್ಗದವರ ಕಾರ್ಯಕ್ಷಮತೆ ಸಾಮರ್ಥ್ಯ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Leave a Reply