Belagavi

ಗ್ರಾಪಂಗಳು ಪಟ್ಟಣ ಪಂಚಾಯ್ತಿಗಳಾಗಿ ಮೇಲ್ದರ್ಜೆಗೇರಿಸುವಾಗ ಮೂಲಸೌಕರ್ಯ ಮತ್ತು ಅನುದಾನಕ್ಕೆ ಕ್ರಮ: ಸಚಿವ ಎಂ.ಟಿ.ಬಿ.ನಾಗರಾಜು


ಬೆಳಗಾವಿ ಸುವರ್ಣಸೌಧ,ಡಿ.೨೧: ಗ್ರಾಪಂಗಳಿAದ ಪಟ್ಟಣ ಪಂಚಾಯ್ತಿಗಳಾಗಿ ಮೇಲ್ದೆರ್ಜೇಗೇರಿಸುವ ಸಂದರ್ಭದಲ್ಲಿ ಅವುಗಳಿಗೆ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಅಗತ್ಯ ಅನುದಾನ ಒದಗಿಸಲು ಕ್ರಮವಹಿಸಲಾಗುವುದು ಎಂದು ಪೌರಾಡಳಿತ,ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
Àದಸ್ಯ ಆರ್.ದರ್ಮಸೇನ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಹೊಸದಾಗಿ ಮೇಲ್ದಜೇರ್ಗರುವ ಪಟ್ಟಣ ಪಂಚಾಯ್ತಿಗಳು,ಪುರಸಭೆ,ನಗರಸಭೆಗಳಿಗೆ ಅಗತ್ಯ ಮೂಲಸೌಕರ್ಯ ಮತ್ತು ಅನುದಾನ ಒದಗಿಸಲು ಸರಕಾರ ಬದ್ಧವಿದೆ ಎಂದು ಅವರು ಹೇಳಿದರು.
ಗ್ರಾಪಂಗಳು ಪಟ್ಟಣ ಪಂಚಾಯ್ತಿಗಳಾಗಿ ಮೇಲ್ದರ್ಜೆಗೇರಿದ ಸಂದರ್ಭದಲ್ಲಿ ಪಿಡಿಒ ಹೊರತುಪಡಿಸಿ ಉಳಿದ ಸಿಬ್ಬಂದಿಗಳನ್ನು ಉಳಿಸಿಕೊಳ್ಳುವುದಕ್ಕೆ ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.
ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ಯಾವುದೇ ಗ್ರಾಪಂಗಳು ಪಟ್ಟಣ ಪಂಚಾಯ್ತಿಗಳನ್ನಾಗಿ ಹಾಗೂ ಪುರಸಭೆ,ನಗರಸಭೆಗಳನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರಕಾರದಲ್ಲಿ ಇರುವುದಿಲ್ಲ ಎಂದು ವಿವರಿಸಿದ ಸಚಿವ ಎಂ.ಟಿ.ಬಿ.ನಾಗರಾಜು ಅವರು ಪಟ್ಟಣ ಪಂಚಾಯ್ತಿ,ಪುರಸಭೆ,ನಗರಸಭೆಗೆ ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿರಬೇಕಾದ ಜನಸಂಖ್ಯೆ ಹಾಗೂ ಇನ್ನೀತ ನಿಯಮಗಳ ಕುರಿತು ಸದನಕ್ಕೆ ವಿವರಿಸಿದರು.


Leave a Reply