Belagavi

ವಿಕಲಚೇತನ ಇಲಾಖೆಯ ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಕ್ರಮ


ಬೆಳಗಾವಿ ಸುವರ್ಣಸೌಧ,ಡಿ.೨೧:ವಿಕಲಚೇತನರ ಇಲಾಖೆಯ ಶಿಕ್ಷಕರಿಗೆ ಹಾಗೂ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ನೀಡಲಾಗುತ್ತಿರುವ ವೇತನ ಶ್ರೇಣಿಯ ವ್ಯತ್ಯಾಸವು ಸರಕಾರದ ಗಮನಕ್ಕೆ ಬಂದಿದ್ದು, ವೇತನ ಶ್ರೇಣಿಯನ್ನು ಪರಿಷ್ಕರಿಸುವ ಪ್ರಸ್ತಾವನೆ ಸರಕಾರದ ಪರಿಶೀಲನೆಯಲ್ಲಿದ್ದು, ಶೀಘ್ರ ನ್ಯಾಯ ಒದಗಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಆಚಾರ ಹಾಲಪ್ಪ ಅವರು ವಿಧಾನಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ಶಶೀಲ್ ನಮೋಶಿ ಅವರು ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ವಿಕಲಚೇತನರ ಹಾಗೂ ಹಿರಿಯ ಸಬಲೀಕರಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಸರಕಾರಿ ಅಂಧ ಮತ್ತು ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿರುವ ಸಹಾಯಕ ಶಿಕ್ಷಕರಿಗೆ,ದೈಹಿಕ ಶಿಕ್ಷಣ ಶಿಕ್ಷಕರು,ಸಂಗೀತ ಶಿಕ್ಷಕರಿಗೆ ವೇತನ ಆಯೋಗದ ಶಿಫಾರಸ್ಸು ಸಂದರ್ಭದಲ್ಲಿ ವ್ಯತ್ಯಾಸವಾಗಿತ್ತು. ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ವ್ಯತ್ಯಾಸ ಸರಿಪಡಿಸಲಾಗಿದೆ;ಆದ್ರೇ ಈ ಶಿಕ್ಷಕರಿಗೆ ವ್ಯತ್ಯಾಸ ಸರಿಪಡಿಸದೇ ಅದೇ ರೀತಿಯಲ್ಲಿ ಮುಂದುವರಿದಿರುವುದರನ್ನು ಸಚಿವರು ಒಪ್ಪಿಕೊಂಡರು ಮತ್ತು ಇದು ಗಮನಕ್ಕೆ ಬಂದಿದ್ದು ಪರಿಷ್ಕರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದರು.


Leave a Reply