Belagavi

ST ಗೆ ಕಾಡುಗೊಲ್ಲರ ಸೇರ್ಪಡೆ : ಸಚಿವ ಮಾಧುಸ್ವಾಮಿ


ಬೆಳಗಾವಿ : ಹಿಂದುಳಿದ ಬುಡಕಟ್ಟಿಗೆ ಸೇರಿರುವ ಅನಕ್ಷರತೆ, ಪಶುಪಾಲನೆ ವೃತ್ತಿನಿರತರಾಗಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಠ ಪಂಗಡ (ಎಸ್.ಟಿ)ಕ್ಕೆ ಸೇರಿಸಲು ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿ ಪತ್ರ ಬರೆದಿದೆ.ಕುಲಶಾಸ್ತ್ರೀಯ ಅಧ್ಯಯನ ಮಾಡಿರುವ ತಜ್ಞರ ಮೂಲಕ ಮಾಹಿತಿ ಪಡೆದು ಕೇಂದ್ರಕ್ಕೆ ಶೀಘ್ರ ಸ್ಪಷ್ಟನೆಗಳನ್ನು ಕಳುಹಿಸಲಾಗುವುದು.

ಕಾಡುಗೊಲ್ಲರ ಹಿತರಕ್ಷಣೆ ಹಾಗೂ ಪೂರ್ಣ ಪ್ರಮಾಣದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಕಂಕಣಬದ್ಧವಾಗಿದೆ ಎಂದು ಕಾನೂನು,ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.

ವಿಧಾನಸಭೆಯಲ್ಲಿ ನಿಯಮ 69ರಡಿ ಶಾಸಕರಾದ ಪೂರ್ಣಿಮಾ, ಕೆ.ಎಂ. ಶಿವಲಿಂಗೇಗೌಡ ಅವರು ನಡೆಸಿದ ಚರ್ಚೆಗೆ ಉತ್ತರ ಒದಗಿಸಿ ಮಾತನಾಡಿದರು. ಕಾಡುಗೊಲ್ಲರನ್ನು ಎಸ್.ಟಿ. ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ 2010 ರಿಂದಲೂ ಹೋರಾಟ ನಡೆಯುತ್ತಿದೆ. ಮೈಸೂರು ವಿಶ್ವವಿದ್ಯಾಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದ ಡಾ. ಅನ್ನಪೂರ್ಣಮ್ಮ ಅವರ ನೇತೃತ್ವದಲ್ಲಿ ಕುಲಶಾಸ್ತ್ರೀಯ ಅಧ್ಯಯನ ಮಾಡಿ ಈ ಹಿಂದೆ 2014 ರಲ್ಲಿ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು.

ಬಹಳ ದೀರ್ಘ ಅವಧಿಯ ನಂತರ ಇತ್ತೀಚೆಗೆ ಕೇಂದ್ರ ಸರ್ಕಾರವು ಪತ್ರ ಬರೆದು ಧಾರ್ಮಿಕ ಮತ್ತು ವೈವಾಹಿಕ ಆಚರಣೆಗಳಲ್ಲಿ ಈ ಸಮುದಾಯವು ಹಿಂದೂ ಧರ್ಮಕ್ಕೆ ಹೋಲುವ ಆಚರಣೆಗಳನ್ನು ರೂಢಿಸಿಕೊಂಡಿದೆ ಎಂದು ತಿಳಿಸಿದೆ.


Leave a Reply