Belagavi

ವಸತಿ ರಹಿತರ ಹಾಗೂ ನಿವೇಶನ ರಹಿತರ ಸಮೀಕ್ಷೆ ಗ್ರಾಮೀಣ ಪ್ರದೇಶ:೧೮,೭೧,೬೯೧ ವಸತಿ ರಹಿತರು,೭,೧೯,೧೯೦ ನಿವೇಶನ ರಹಿತರು!


ಬೆಳಗಾವಿ ಸುವರ್ಣಸೌಧ,ಡಿ.೨೨: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ೨೦೧೮ರಲ್ಲಿ ವಸತಿ ರಹಿತರ ಹಾಗೂ ನಿವೇಶನ ರಹಿತರ ಸಮೀಕ್ಷೆ ಕೈಗೊಳ್ಳಲಾಗಿದ್ದು, ಈ ಸಮೀಕ್ಷೆಯಲ್ಲಿ ೧೮,೭೧,೬೯೧ ವಸತಿರಹಿತರು ಹಾಗೂ ೭,೧೯,೧೯೦ ನಿವೇಶನರಹಿತರಿರುವ ಮಾಹಿತಿ ಲಭ್ಯವಾಗಿದೆ.
ಅದೇ ರೀತಿ ನಗರದಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೈಗೊಂಡ ಸಮೀಕ್ಷೆ ಅನುಸಾರ ೧,೪೧,೫,೧೨೧ ಮನೆಗಳಿಗೆ ಬೇಡಿಕೆ ಇರುವುದು ಕಂಡುಬAದಿದೆ. ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ೮೯೨೧೯ ವಸತಿ ರಹಿತರು ಹಾಗೂ ೪೩೪೭ ನಿವೇಶನರಹಿತರು ಕಂಡುಬAದಿದ್ದಾರೆ. ನಗರ ಪ್ರದೇಶದಲ್ಲಿ ಇದೇ ಜಿಲ್ಲೆಯಲ್ಲಿ ೨೧೪೦೯ ವಸತಿ ರಹಿತರು ಮತ್ತು ೨೫೫೩೩ ನಿವೇಶನರಹಿತರಿದ್ದಾರೆ ಎಂಬ ಮಾಹಿತಿಯನ್ನು ವಸತಿ ಸಚಿವ ವಿ.ಸೋಮಣ್ಣ ಅವರು ವಿಧಾನಪರಿಷತ್‌ನಲ್ಲಿ ಬಿಚ್ಚಿಟ್ಟರು.
ಸದಸ್ಯ ವಿಜಯಸಿಂಗ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ಸಾಲಿಗೆ ವಿವಿಧ ವಸತಿ ಯೋಜನೆಗಳಡಿ ೫ಲಕ್ಷ ಹೊಸ ಮನೆಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶಕ್ಕೆ ೪ಲಕ್ಷ ಮತ್ತು ನಗರ ಪ್ರದೇಶಕ್ಕೆ ೧ಲಕ್ಷ ಮನೆಗಳ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಗ್ರಾಪಂ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಅರ್ಹ ಫಲಾನುಭವಿಗಳ ಆಯ್ಕೆಗೆ ಸೂಚನೆ ನೀಡಲಾಗಿದ್ದು, ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಬೀದರ್ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಅಂದರೇ ೨೦೧೮-೧೯ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ವಸತಿ ಯೋಜನೆಗಳಡಿ ೧೮೮೭೫ ಮನೆಗಳನ್ನು ಮಂಜೂರು ಮಾಡಿದ್ದು, ಈ ಪೈಕಿ ೧೬೦೫೭ ಫಲಾನುಭವಿಗಳನ್ನು ಆಯ್ಕೆಗೊಳಿಸಿ ಕಾಮಗಾರಿ ಆದೇಶಪತ್ರ ನೀಡಲಾಗಿದೆ ಎಂದರು.


Leave a Reply