Belagavi

ಕೃಷಿ ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಕೃಷಿ ಸಚಿವ ಬಿ.ಸಿ.ಪಾಟೀಲ್


ಬೆಳಗಾವಿ, ಸುವರ್ಣಸೌಧಡಿ.೨೪; ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ತಿಳಿಸಿದರು.
ಸದಸ್ಯ ವಿ.ಎಸ್.ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿರುವ ೪ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹಾಗೂ ಬೊಧಕೇತರ ಹುದ್ದೆಗಳು ಸೇರಿದಂತೆ ೫೮೧೮ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ ೨೬೭೩ ಖಾಲಿ ಹುದ್ದೆಗಳಿವೆ. ವಿದ್ಯಾರ್ಥಿಗಳ ಬೋಧನೆ ತೊಂದರೆಯಾಗದAತೆ ಹೊರ ಗುತ್ತಿಗೆ ಆಧಾರದ ಮೇಲೆ ಅಧ್ಯಾಪಕರ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಹೊರಡಿಸಿದ ನೇಮಕಾತಿ ಅಧಿಸೂಚನೆಯಲ್ಲಿ ಉಂಟಾಗಿರುವ ವ್ಯತ್ಯಯ ಕುರಿತಂತೆ ಅಧ್ಯಾಪಕರ ಸಂಘದೊAದಿಗೆ ಈಗಾಗಲೇ ರಾಜ್ಯಪಾಲರು ಸಭೆ ನಡೆಸಿ ಚರ್ಚಿಸಿದ್ದಾರೆ. ಶೀಘ್ರದಲ್ಲೇ ಖುದ್ದಾಗಿ ನಾನು ವಿವಿಗೆ ಭೇಟಿ ನೀಡಿ ಅಧ್ಯಾಪಕರ ಸಂಘ ಹಾಗೂ ಕುಲಪತಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಕೃಷಿ ವಿ.ವಿ.ಗಳಲ್ಲಿರುವ ಕೃಷಿ ವಿಜ್ಞಾನ ಕೇಂದ್ರಗಳು ಹಾಗೂ ಕೃಷಿ ಸಂಶೋಧನ ಕೇಂದ್ರಗಳಲ್ಲಿ ಐ.ಸಿ.ಎ.ಆರ್ ನಿಂದ ಶೇ.೧೦೦ ರಷ್ಟು ಅನುದಾನಿತ ಖಾಲಿ ಇರುವ ೪೯ ಬೋಧಕರ ಹಾಗೂ ೮೩ ಬೋಧಕೇತರ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದೆ. ಧಾರವಾಡ ಕೃಷಿ ವಿ.ವಿ.ಯಿಂದ ಪ್ರಸ್ತಾವನೆ ಸ್ವೀಕೃತವಾಗಿದೆ ಎಂದು ತಿಳಿಸಿದರು.


Leave a Reply