Belagavi

ಎಸ್.ಸಿ ಹಾಗೂ ಎಸ್.ಟಿ ಫಲಾನುಭವಿಗಳ ಅನುದಾನ ಹೆಚ್ಚಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ


ಬೆಳಗಾವಿ, ಸುವರ್ಣಸೌಧಡಿ.೨೪; ಕೋವಿಡ್ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಯಾವುದೇ ಯೋಜನೆಗಳು ಸ್ಥಗಿತಗೊಂಡಿರುವುದಿಲ್ಲ. ಸ್ವಯಂ ಉದ್ಯೋಗ ಯೋಜನೆಯಡಿ ಹೆಚ್ಚು ಜನರಿಗೆ ನೆರವು ನೀಡಲು ಸಾಲ ಮತ್ತು ಸಹಾಯ ಧನ ನೀಡುವ ಮೊತ್ತವನ್ನು ಪರಿಷ್ಕರಿಸಲಾಗಿದೆ. ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಯು.ಬಿ.ವೆಂಕಟೇಶ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಕೋವಿಡ್-೧೯ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಿತ್ತಿರುವ ಯಾವುದೇ ಯೋಜನೆ ಕುಂಠಿತಗೊAಡಿರುವುದಿಲ್ಲ. ಆದರೆ ಕೋವಿಡ್-೧೯ ಹಿನ್ನಲೆಯಲ್ಲಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳಿಗೆ ಸಹಾಯಧನ ಮೊತ್ತವನ್ನು ಪರಿಷ್ಕರಿಸಲಾಗಿದೆ. ಕಳೆದ ಎರೆಡು ವರ್ಷದಲ್ಲಿ ೭೫೮೧ ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಪೈಕಿ ೭೪೬೪ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಯಾವುದೇ ಯೋಜನೆಗಳು ಸ್ಥಗಿತಗೊಂಡಿಲ್ಲ ಎಂದು ತಿಳಿಸಿದರು.


Leave a Reply