Belagavi

ಬೆಂಕಿಗೆ ಮನೆ ಆಹುತಿ: ಸ್ಥಳಕ್ಕೆ ತೆರಳಿ ಒಂದು ಲಕ್ಷ ರೂ. ನೆರವು ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್


ಬೆಳಗಾವಿ – ಬೆಂಡಿಗೇರಿ ಗ್ರಾಮದ ರಾಜು ಮರಶೆಟ್ಟಿ ಎನ್ನುವವರ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟುಹೋಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸ್ಥಳಕ್ಕೆ ಭೇಟಿ ನೀಡಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.

ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದ ಅಪಾರ ಆಸ್ತಿ, ಕಾಗದಪತ್ರಗಳು ಎಲ್ಲವೂ ನಾಶವಾಗಿವೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಸುದ್ದಿ ತಿಳಿದ ತಕ್ಷಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸ್ಥಳಕ್ಕೆ ತೆರಳಿ ಕುಟುಂಬಕ್ಕೆ ಧೈರ್ಯವನ್ನು ತುಂಬಿದರು. ವೈಯಕ್ತಿಕವಾಗಿ ಒಂದು ಲಕ್ಷ ರೂ,ಗಳ ಪರಿಹಾರ ನೀಡಿದ ಶಾಸಕಿ, ಸರ್ಕಾರದಿಂದ ಸಿಗುವ ಪರಿಹಾರವನ್ನು ಕೂಡ ಒದಗಿಸಿ ಕೊಡುವುದಾಗಿ ಭರವಸೆ ನೀಡಿದರು.
ಕಷ್ಟ ಕಾಲದಲ್ಲಿ ತಕ್ಷಣ ಸ್ಪಂದಿಸಿದ ಶಾಸಕರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ, ಕೃತಜ್ಞತೆ ಸಲ್ಲಿಸಿದರು.


Leave a Reply