Belagavi

ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಅನುಷ್ಠಾನದ ಪ್ರಗತಿ ಪರೀಶಿಲನಾ ಸಭೆ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಯೋಜನೆಗಳಲ್ಲಿ ಅಧಿಕಾರಿಗಳು ಪ್ರಗತಿ ಸಾಧಿಸಲು ಧನ್ಯಕುಮಾರ ಗುಂಡೆ ಸೂಚನೆ


ಬೆಳಗಾವಿ, ಡಿ.೨೭ : ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಲ್ಯಾಣ ಕಾರ್ಯಕ್ರಮಗಳ ಯೋಜನೆಗಳು ಸದ್ಬಳಕೆಯಾಗಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಹಾಗೂ ಹಿಂದುಳಿದ ಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕು ಎಂದು ರಾಷ್ಟಿçÃಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಧನ್ಯಕುಮಾರ ಗುಂಡೆ ಅಧಿಕಾರಿಗಳಿಗೆ ಸೂಚನೆ £Ãಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಡಿ.೨೭) ನಡೆದ ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರೀಶಿಲನಾ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಲ್ಯಾಣ ಕಾರ್ಯಕ್ರಮಗಳ ಯೋಜನೆಗಳ ಜೊತೆಗೆ ಪ್ರಧಾನಮಂತ್ರಿ ಜನ ವಿಕಾಸ ಯೋಜನೆ, ರಾಜ್ಯ ಹಾಗೂ ಕೇಂದ್ರ ಪರಿಷ್ಕöÈತ ವಿವಿಧ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳ ಗುರಿ ಸಾಧನೆಗಾಗಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ £ರ್ವಹಿಸಬೇಕು ಎಂದು ತಿಳಿಸಿದರು.
ಮಂಜೂರಾದ ಅನುದಾನವನ್ನು ಎಲ್ಲ ಇಲಾಖೆಯ ಅಧಿಕಾರಿಗಳು ಗುರಿ ಸಾಧನೆಗಾಗಿ ಅನುದಾನ ಬಳಕೆಯಾಗುವಂತೆ ಕಾಳಜಿವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಶೇ.೯೮% ರಷ್ಟು ಸಾಧನೆ:
ಜಿಲ್ಲೆಯಲ್ಲಿ ಇದುವರೆಗೆ ಶೇ.೯೮ ರಷ್ಟು ಮೊದಲ ಡೋಸ್ ಹಾಗೂ ಶೇ.೯೫ ರಷ್ಟು ಎರಡನೆಯ ಡೋಸ್ ಲಸಿಕೆ £Ãಡಲಾಗಿದೆ. ಮುಂಬರುವ ಕೋವಿಡ್ ೩ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪ್ರಭಾವ ಬೀರುವ ಸಾಧ್ಯತೆ ಇರುವುದಾಗಿ ಮಾಹಿತಿ ಇದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವೆಂಟಿಲೇಟರ್, ಬೆಡ್ ಗಳ ವ್ಯವಸ್ಥೆ ಹಾಗೂ ಮಕ್ಕಳ ತಜ್ಞರನ್ನು ನೇಮಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಹಿಳೆಯರಿಗೆ ಅವಶ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ £Ãಡಲಾಗುತ್ತಿದೆ ಮತ್ತು ತ್ರೆöÊಮಾಸಿಕ ಗುರಿ ಸಾಧಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಸವರಾಜ ವರವಟ್ಟೆ ವಿವರಿಸಿದರು.
ಡಿಸಿಸಿ ಬ್ಯಾಂಕ್ ಸಾಲ ಸೌಲಭ್ಯಗಳನ್ನು ಒದಗಿಸಬೇಕು ಮತ್ತು ರೇಷ್ಮೆ ಇಲಾಖೆಯ £ರ್ದಿಷ್ಟ ಅವಧಿಯಲ್ಲಿ ಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕು.
ಇಂಧನ ಇಲಾಖೆಯ ಹೊಸ ಮಾರ್ಗಸೂಚಿಯಂತೆ ರೈತರ ಟಿಸಿ ತೊಂದರೆಯಾದಲ್ಲಿ ೨೪ ಗಂಟೆಗಳಲ್ಲಿ ಹೆಸ್ಕಾಂ ಅಧಿಕಾರಿಗಳು ಬದಲಾವಣೆ ಮಾಡಿಕೊಡಬೇಕು ಎಂದು ಧನ್ಯಕುಮಾರ ಗುಂಡೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ £Ãಡಿದರು.
ಯೋಜನೆಗಳನ್ನು ರೂಪಿಸಿ £ರ್ದಿಷ್ಟ ಅವಧಿಯಲ್ಲಿ ಗುರಿ ಸಾಧಿಸಬೇಕು, ಕೋವಿಡ್ ಹಾಗೂ ಇತರೆ ಕಾರಣಗಳಿಂದ ಹಿಂದುಳಿದ ಯೋಜನೆಗಳ ಕುರಿತು ಗಮನಹರಿಸಿ ಯೋಜನೆಗಳಲ್ಲಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ£ರ್ವಾಹಕ ಅಧಿಕಾರಿ ದರ್ಶನ್. ಹೆಚ್. ವಿ ತಿಳಿಸಿದರು.
ಅರಿವು ಸಾಲ ಯೋಜನೆ, ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಗಳನ್ನು ಅಲ್ಪಸಂಖ್ಯಾತರ ಅನುಕೂಲಕ್ಕಾಗಿ ಈಗಾಗಲೇ ಅರ್ಜಿಗಳನ್ನು ಕರೆಯಲಾಗಿದೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ £Ãಡಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಡಾ.ಅಬ್ದುಲ್ ರಶೀದ್ ಮಿರ್ಜನ್ನವರ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಲ್ಯಾಣ ಕಾರ್ಯಕ್ರಮದ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


Leave a Reply