Belagavi

ಬೆಳಗಾವಿ ‘ಅಸ್ಮಿತೆ’ ಮೇಳದಲ್ಲಿ ದಾಖಲೆಯ ರೂ ೬೦ ಲಕ್ಷ ವಹಿವಾಟು


ಬೆಂಗಳೂರು: ಬೆಳಗಾವಿಯಲ್ಲಿ ಈಚೆಗೆ ಏರ್ಪಡಿಸಿದ್ದ (ಡಿ.೧೫ರಿಂದ ೨೦ರವರೆಗೆ) ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ‘ಅಸ್ಮಿತೆ’ಯಲ್ಲಿ ದಾಖಲೆಯ ಸುಮಾರು ೬೦ ಲಕ್ಷ ರೂಪಾಯಿಗಳ ವಹಿವಾಟು ನಡೆದಿದೆ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆಯಲ್ಲಿ ತಿಳಿಸಿರುವ ಅವರು, ಮುಖ್ಯಮಂತ್ರಿ ಅವರು ಉದ್ಘಾಟಿಸಿದ್ದ ಈ ಮೇಳದಲ್ಲಿ ೭ ಆಹಾರ ಮಳಿಗೆಗಳೂ ಸೇರಿದಂತೆ ಒಟ್ಟು ೧೪೦ ಮಳಿಗೆಗಳು ಭಾಗವಹಿಸಿದ್ದವು. ಇದುವರೆಗೆ ಈ ರೀತಿಯ ಮೇಳಗಳಲ್ಲಿ ಆಗಿರುವ ಅತಿ ಹೆಚ್ಚು ವಹಿವಾಟು ಇದಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಅವರು ಅಭಿನಂದನೆ ಸಲ್ಲಿಸಿದರು.
ಸೆಣಬಿನ ಬ್ಯಾಗುಗಳನ್ನು ಮಾಡುವ ವಿಜಯಪುರ ಎನ್.ಆರ್.ಎಲ್.ಎಂ.ನ ಯಶೋಧಾ ಸ್ವಸಹಾಯ ಗುಂಪು ಎಲ್ಲಕ್ಕಿಂತ ಹೆಚ್ಚು ರೂ. ೧,೨೬,೯೦೦ ವ್ಯಾಪಾರ ನಡೆಸಿದೆ. ನಂತರದ ಸ್ಥಾನದಲ್ಲಿ, ಕಾಟನ್ ಬ್ಯಾಗುಗಳು ಮತ್ತು ಕ್ವಿಲ್ಟ್ ಗಳನ್ನು ಮಾಡುವ ಬೆಳಗಾವಿಯ ಮಾತಾ ಸಾವಿತ್ರಿ ಬಾಯಿ ಸ್ವಸಹಾಯ ಸಂಘ ರೂ ೧,೧೯,೫೫೮, ವುಡ್ ಇನ್ ಲೇಗಳನ್ನು ಮಾಡುವ ಮೈಸೂರಿನ ಚಾಮುಂಡೇಶ್ವರಿ ಸ್ವಸಹಾಯ ಸಂಘ ರೂ ೧,೧೩,೮೩೦, ಇಳಕಲ್ ಸೀರೆಗಳನ್ನು ಮಾಡುವ ಶ್ರೀ ರೇವಣ್ಣಸಿದ್ದೇಶ್ವರ ಸ್ವಸಹಾಯ ಸಂಘ ರೂ ೧,೦೦,೦೨೬ ಹಾಗೂ ಆಭರಣ ಮತ್ತು ಪೇಟಿಂಗ್ ಗಳನ್ನು ಮಾಡುವ ಬೆಳಗಾವಿಯ ಜನವಾಣಿ ಮಾತಾ ಸ್ವಸಹಾಯ ಸಂಘವು ರೂ ೮೭,೪೨೦ ಮೊತ್ತದ ವ್ಯಾಪಾರಗಳನ್ನು ಮಾಡಿವೆ ಎಂದು ಸಚಿವರು ವಿವರಿಸಿದ್ದಾರೆ.
ರಾಜ್ಯ ಜೀವನೋಪಾಯ ಅಭಿಯಾನ (ನಗರ ಮತ್ತು ಗ್ರಾಮೀಣ), ಕೌಶಲಾಭಿವೃದ್ಧಿ- ಉದ್ಯಮಶೀಲತೆ – ಜೀವನೋಪಾಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಈ ಮೇಳವನ್ನು ನಡೆಸಲಾಗಿತ್ತು. ಬೇಕರಿ ಹಾಗೂ ಇತರೆ ಲಘು ತಿ£ಸುಗಳು, ಬಗೆಬಗೆಯ ಉಪ್ಪಿನಕಾಯಿಗಳು, ಹೈನು ತಿ£ಸುಗಳು, ಮಸಾಲೆ ಪದಾರ್ಥಗಳು, ಉಡುಪುಗಳು, ಸೀರೆಗಳು, ವಿವಿಧ ರೀತಿಯ ಹಾರಗಳು, ಚರ್ಮ ಹಾಗೂ ಕೂದಲು ಆರೈಕೆ ಉತ್ಪನ್ನಗಳು, ಸ್ಯಾ£ಟೇಷನ್ ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳು ಹಾಗೂ ಕೈಕುಸುರಿ ವಸ್ತುಗಳನ್ನು ಇಲ್ಲಿ ಪ್ರದರ್ಶಿಸುವ ಜೊತೆಗೆ ಮಾರಾಟಕ್ಕೆ ಇಡಲಾಗಿತ್ತು.


Leave a Reply