karanatakaKoppal

116ನೇ ನೀರಾವರಿ ಸಲಹಾ ಸಮಿತಿ ಸಭೆ


ಕೊಪ್ಪಳ, ಡಿ.28 (ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಮಂಗಳವಾರದಂದು (ಡಿ.28) ಮುನಿರಾಬಾದ್ ಕಾಡಾ ಟಿಬಿಪಿ ಸಭಾಂಗಣದಲ್ಲಿ 116ನೇ ನೀರಾವರಿ ಸಲಹಾ ಸಮಿತಿ ಸಭೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಸರ್ಕಾರದ ಪ್ರವಾಸೋಧ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ವಹಿಸಿದ್ದರು. ಇದೇ ಸಂಧರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಕೊಪ್ಪಳ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಫ್., ಕೃಷಿ ಬೆಳೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಮುಖ್ಯ ಅಭಿಯಂತರರಾದ ಕೃಷ್ಣಾಜಿ ಚೌವ್ಹಣ್, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ನಾಲಾ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಪಿ.ಬಿ. ಪ್ರಕಾಶ್, ಕಾರ್ಯಪಾಲಕ ಅಭಿಯಂತರರಾದ ಕೆ.ಬಿ.ಹೆಚ್. ಶಿವಶಂಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


Leave a Reply