Belagavi

ಮೂರು ಬಾರಿ ಸಚಿವರಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಿ : ಶಾಸಕ ರೇಣುಕಾಚಾರ್ಯ ಹೇಳಿದರು


ಹುಬ್ಬಳ್ಳಿ: ಎರಡು – ಮೂರು ಬಾರಿ ಸಚಿವರಾಗಿದ್ದವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಿ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಸಚಿವ ಸ್ಥಾನ ಅನುಭವಿಸದವರು ಪಕ್ಷ ಸಂಘಟನೆಗೆ ಒತ್ತು ಕೊಡಲಿ ಮುಂದೆ ವಿಧಾನಸಭೆ ಚುನಾವಣೆ ಬರಲಿದೆ ಹೀಗಾಗಿ ಪಕ್ಷದ ಸಂಘಟನೆಗೆ ಹಿರಿಯರು ಒತ್ತು ಕೊಡಬೇಕು ಬಿಜೆಪಿ ಪಕ್ಷವನ್ನು ಗೆಲ್ಲಿಸಿಕೊಂಡು ಬರುವ ಕೆಲಸವನ್ನು ಹಿರಿಯರು ಮಾಡಬೇಕು ಎಂದರಲ್ಲದೆ ಅಧಿಕಾರ ಅನುಭವಿಸಿದ ನಾಯಕರು ಸಚಿವ ಸ್ಥಾನ ತ್ಯಾಗ ಮಾಡಲಿ ಎಂದರು.

ನನಗೇ ಸಚಿವ ಸ್ಥಾನ ಕೊಡಬೇಕೆಂದಿಲ್ಲ ಯಾರಿಗೆ ಬೇಕಾದ್ರೂ ಸಚಿವ ಸ್ಥಾನ ಕೊಡಲಿ ಹೊಸ ಮುಖಗಳಿಗೆ ಸಚಿವ ಸ್ಥಾನ ಕೊಟ್ಟರೆ ಒಳ್ಳೆಯದು ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ಕರೆ ವಿಚಾರ ಇದು ಕಾಂಗ್ರೆಸ್ ಪ್ರಾಯೋಜಿತ ಹೋರಾಟ ಎಂದರಲ್ಲದೆ ಕೋವಿಡ್ ನಿಂದ ಜನ ಬಳಲಿ ಹೋಗಿದ್ದಾರೆ ಇಂತಹ ಸಂದರ್ಭದಲ್ಲಿ ಬಂದ್ ಆಚರಿಸುವುದು ಸರಿಯಲ್ಲ ಎಂಎಸ್ ಮೇಲಿನ ನಿರ್ಬಂಧಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ
ಬಂದ್ ಆಚರಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದರು.


Leave a Reply