Belagavi

ಸಿದ್ದರಾಮೇಶ್ವರ ಕಾಲೇಜ್ ಭೂಮಿಪೂಜೆ ಇಂದು


ಬೆಳಗಾವಿ ; ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಆವರಣದಲ್ಲಿ ದಿನಾಂಕ ;31-12-2021 ರಂದು ಬೆಳಗಿನ 9-00 ಗಂಟೆಗೆ ಸಿದ್ಧರಾಮೇಶ್ವರ ಪದವಿಪೂರ್ವ ಕಾಲೇಜಿನ ಕಟ್ಟಡದ ಭೂಮಿಪೂಜೆ ನೆರವೇರಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ .

ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಜರುಗಲಿರುವ ಈ ಕಾರ್ಯಕ್ರಮದಲ್ಲಿ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧೀಶರಾದ ಡಾ ಅಲ್ಲಮಪ್ರಭು ಮಹಾಸ್ವಾಮೀಜಿ ನೇತ್ರತ್ವದಲ್ಲಿ ಜರುಗಲಿರುವ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಕ್ರೈಮ್ ಬ್ರ್ಯಾಂಚ್ ಪೊಲೀಸ್ ಉಪ ಆಯುಕ್ತರಾದ ಶ್ರೀ ನಾರಾಯಣ ಭರಮನಿ ಮತ್ತು ಪದವಿಪೂರ್ವ ಶಿಕ್ಷಣ ವಿಭಾಗದ ಬೆಳಗಾವಿ ಉಪನಿರ್ದೇಶಕ ಶ್ರೀ ನಾಗರಾಜ ವಿ ಅವರು ಆಗಮಿಸಲಿದ್ದಾರೆ .ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಸಿದ್ಧರಾಮೇಶ್ವರ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ಕೆ ಬಿ ಹಿರೇಮಠ ವಹಿಸಲಿದ್ದಾರೆ .


Leave a Reply