Belagavi

ಬೆಳಗಾವಿ : ಸುಟ್ಟು ಭಸ್ಮವಾದ 5 ಎಕರೆ ಕಬ್ಬು


ಬೆಳಗಾವಿ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರು ಸಮಯಪ್ರಜ್ಞೆಯಿಂದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬನ್ನು ಬಚಾವ್ ಮಾಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ರೈತರು ಆರೋಪಿಸಿದ್ದು, ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Leave a Reply