BelagaviBengaluruState

ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿದೆ : ಗೃಹಸಚಿವ


ಶಿವಮೊಗ್ಗ : ರಾಜ್ಯದಲ್ಲಿ ಈಗಾಗಲೇ ಕೊರೊನಾ 3 ನೇ ಅಲೆ ಆರಂಭವಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ವಿಕೇಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವರು, ರಾಜ್ಯದಲ್ಲಿ ಈಗಾಗಲೇ ಕೊರೊನಾ 3 ನೇ ಅಲೆ ಬೆಂಗಳೂರಿನಲ್ಲಿ ದಿನೇ ದಿನೆ 2 ಸಾವಿರಕ್ಕೂ ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗುತ್ತಿವೆ. ಹೀಗಾಗಿ ಬೆಂಗಳೂರಿನಲ್ಲಿ ವಿಕೇಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ನಿರ್ಧಾರದಲ್ಲಿ ರಾಜಕೀಯ ದುರುದ್ದೇಶವಿಲ್ಲ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೂ ಇದು ಅನ್ವಯಿಸುತ್ತೆ. ಕಾಂಗ್ರೆಸ್ ಪಾದಯಾತ್ರೆಗೆ ಯಾವುದೇ ಪ್ರತ್ಯೇಕ ವ್ಯವಸ್ಥೆ ಇಲ್ಲ. ಕೇಂದ್ರ ಸರ್ಕಾರ ಮತ್ತು ತಜ್ಞರ ಸಲಹೆ ಪಡೆದು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.


Leave a Reply