Belagavi

ವೀಕೆಂಡ್ ಕರ್ಫ್ಯೂ ವಾಪಸ್ ಇಲ್ಲ: ಸಿಎಂ ಸ್ಪಷ್ಟನೆ


ಬೆಂಗಳೂರು: ವೀಕೆಂಡ್ ಕರ್ಫ್ಯೂ ಸದ್ಯಕ್ಕೆ ವಾಪಸ್ ಇಲ್ಲವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ಸದ್ಯ ನೈಟ್ ಕರ್ಫ್ಯೂ ಮುಂದುವರಿಯುತ್ತಿದ್ದು, ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

ವೀಕೆಂಡ್ ಲಾಕ್ ಡೌನ್ ಬಗ್ಗೆ ಇಂದಿನ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ವೀಕೆಂಡ್‌ ಕರ್ಫ್ಯೂನಿಂದ ವಾಣಿಜ್ಯ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಕೊರೊನಾ ನೋಡಿಕೊಂಡು ಮುಂದೆ ತೀರ್ಮಾನಿಸೋಣ. ಕ್ಯಾಬಿನೆಟ್ ನಲ್ಲಿ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎಂದರು.

ಎರಡು ವಾರಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಹೇರಲಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಕೆಲ ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ರಾಜ್ಯದ ಎಲ್ಲಾ ಕಡೆ ಸರ್ಕಾರ ನಿಯಮ ಜಾರಿ ಮಾಡಬೇಕಾದ ಅವಶ್ಯಕತೆ ಇರಲಿಲ್ಲ ಎಂದು ಆಕ್ರೋಶ ಹೊರಬಿದ್ದಿತ್ತು.


Leave a Reply