Belagavi

ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ


ಬೆಳಗಾವಿ: ಸಂಗೊಳ್ಳಿ ರಾಯಣ್ಣ ಕೋ-ಆಪರೇಟಿವ್ ಸೊಸೈಟಿ ಹೆಸರಲ್ಲಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ವಂಚನೆ ಮಾಡಿದ್ದ  ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಸ್ಥಾಪಿಸಲಾಗಿದ್ದ ಸಂಗೊಳ್ಳಿ ರಾಯಣ್ಣ ಕೋ-ಆಪರೇಟಿವ್ ಸೊಸೈಟಿಯು 250 ಕೋಟಿ ಸಾರ್ವಜನಿಕರ ಹಣ ವಂಚನ ಮಾಡಿದ ಆರೋಪದಡಿ ಪ್ರಕರಣಗಳನ್ನು ದಾಖಲಿಸಲಾಗಿತ್ತು ಇದಕ್ಕೆ ಸಂಬಂಧಿಸಿದಂತೆ ಸೊಸೈಟಿ ಅಧ್ಯಕ್ಷ ಆನಂದ್ ಬಾಲಕೃಷ್ಣ ಅಪ್ಪುಗೋಳ್ ಅವರನ್ನು ಇಂದು ಇಡಿ ಇಲಾಖೆ ವಶಕ್ಕೆ ಪಡೆದುಕೊಂಡಿರುವುದಾಗೆ ಇಲಾಖೆಯ ಟ್ವಿಟರ್ ನಲ್ಲಿ ಟ್ವಿಟ್ ಮಾಡಿದೆ.


Leave a Reply