BengaluruState

ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಅಧಿಕೃತ ಚಾಲನೆ


ಬೆಂಗಳೂರು : ಮೇಕೆದಾಟು ಯೋಜನೆಗೆ ಚಾಲನೆ ನೀಡುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಇಂದಿನಿಂದ ಪಾದಯಾತ್ರೆ ಹಮ್ಮಿಕೊಂಡಿದ್ದು, ಕನಕಪುರ ಸಮೀಪವಿರುವ ಕಾವೇರಿ ಹಾಗೂ ಅರ್ಕಾವತಿ ನದಿ ಸಂಗಮ ತಾಣದಲ್ಲಿ ಅದ್ದೂರಿ ಚಾಲನೆ ನೀಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಆಯೋಜನೆಗೊಂಡಿರುವ 10 ದಿನಗಳ ನೀರಿಗಾಗಿ ನಡಿಗೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಚಾಲನೆ ನೀಡಿದ್ದಾರೆ.

ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಸೇರಿದಂತೆ ಒಟ್ಟು 169 ಕಿಮೀ ದೂರ ಹಾದುಹೋಗುವ ಈ ಪಾದಯಾತ್ರೆಗೆ ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಆಕ್ಷೇಪ ಎತ್ತಿವೆ. ಜೊತೆಗೆ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆ ಕೈಬಿಡುವಂತೆ ಕಾಂಗ್ರೆಸ್ ಗೆ ರಾಜ್ಯ ಸರ್ಕಾರ ಆಗ್ರಹ ಮಾಡಿದೆ.

ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಂಸದ ಡಿ.ಕೆ.ಸುರೇಶ್, ನಟರಾದ ದುನಿಯಾ ವಿಜಯ್, ಸಂಗೀತ ನಿರ್ದೇಶಕ ಸಾಧುಕೋಕಿಲಾ, ಮಾಜಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಸೇರಿದಂತೆ ಹಲವು ಮುಖಂಡರು, ಕಾಂಗ್ರೆಸ್ ಶಾಸಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.


Leave a Reply