bagalkotBengaluruState

ಬನಶಂಕರಿ ಜಾತ್ರೆ ರದ್ದು


ಬಾಗಲಕೋಟೆ : ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹೋದ ವರ್ಷದಂತೆ ಈ ವರ್ಷವು ರಾಜ್ಯದಲ್ಲಿ ನಡೆಯುವ ಬಹುದೊಡ್ಡ ಜಾತ್ರೆಗಳಲ್ಲಿ ಒಂದಾದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ದೇವಿ ಜಾತ್ರೆಯನ್ನು ರದ್ದು ಪಡಿಸಲು ನಿರ್ಧರಿಸಲಾಗಿದೆ. ಜಾತ್ರೆಗೆ ರಾಜ್ಯ, ಹೊರರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು.

ಈ ವರ್ಷ ಜನವರಿ 09 ರಿಂದ 19ರ ವರೆಗೆ ಜಾತ್ರಾ ಮಹೋತ್ಸವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಹೆಚ್ಚಳ ಹಾಗೂ ವೀಕೆಂಡ್ ಕರಪ್ಯೂ, ಜಾತ್ರೆ, ಮದುವೆ ಸಮಾರಂಭ ಸೇರಿದಂತೆ ಎಲ್ಲ ಕಾರ್ಯಕ್ರಮಗಳು ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಬನಶಂಕರಿ ದೇವಿ ಜಾತ್ರೆಯನ್ನ ರದ್ದು ಪಡಿಸಿ, ಸರಳವಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ.

ಬಾದಾಮಿ ಬನಶಂಕರಿ ದೇವಿ ಜಾತ್ರೆ ಹೊಸ ವರ್ಷದ ಮೊದಲ ಜಾತ್ರೆಯಾಗಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದರು. ರಾಜ್ಯ ಮಾತ್ರವಲ್ಲದೆ ಮಹಾರಾಷ್ಟ್ರ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಿದ್ದರು. ಒಂದು ತಿಂಗಳ ಕಾಲ ನಡೆಯುವ ಜಾತ್ರೆಯಲ್ಲಿ ಹಲವು ವಿಶೇಷತೆಗಳಿದ್ದು ಜಾನುವಾರು ಜಾತ್ರೆ, ನಾಟಕ ಪ್ರದರ್ಶನ, ರೈತರ ಕೃಷಿ ಉಪಕರಣಗಳು ಮಾರಾಟ, ಮನೆ ಬಳಕೆ ವಸ್ತುಗಳ ಮಾರಾಟ ಸೇರಿದಂತೆ ಹಲವಾರು ವ್ಯಾಪಾರ ವಹಿವಾಟುಗಳು ಇಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದವು. ಹಗಲು ರಾತ್ರಿ ಎನ್ನದೇ ದಿನದ 24 ಗಂಟೆಯೂ ಜನರಿಂದ ತುಂಬಿ ತುಳುಕುತ್ತಿತ್ತು ಆದರೆ ಇದಕ್ಕೆಲ್ಲ ಈಗ ಬ್ರೇಕ್ ಬಿದ್ದಿದೆ.


Leave a Reply