Belagavi

ಕೋವಿಡ್ ಹಿನ್ನಲೆ: ವಿಭಾಗ ಮಟ್ಟದ ಕ್ರೀಡಾ ಶಾಲೆ, ಕ್ರೀಡಾ ನಿಲಯ ಆಯ್ಕೆ ಪ್ರಕ್ರಿಯೆ ಮುಂದೂಡಿಕೆ


ಬೆಳಗಾವಿ,ಜ.೧೧: ೨೦೨೨-೨೩ ನೇ ಸಾಲಿನ ಕ್ರೀಡಾ ಶಾಲೆ, ಕ್ರೀಡಾ ನಿಲಯಗಳಿಗೆ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕಿರಿಯ ವಿಭಾಗ ಆಯ್ಕೆ ಪ್ರಕ್ರಿಯೆಯನ್ನು ಜನವರಿ ೧೩ ರಂದು ಹಾಗೂ ಹಿರಿಯ ವಿಭಾಗ ಜನವರಿ ೧೪ ರಂದು ಧಾರವಾಡ ಜಿಲ್ಲೆಯ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಧಾರವಾಡ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಸದರಿ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಲಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: ೦೮೩೧-೨೪೭೪೧೦೧ ಯನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply