Belagavi

ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ


ಬೆಳಗಾವಿ,ಜ.೧೧: ಬೆಳಗಾವಿ ಜಿಲ್ಲಾ ವ್ಯಾಪ್ತಿಯ ೫೩ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೨೩೨ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಗುರುತಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಬೆಳಗಾವಿ ಜಿಲ್ಲಾ ವ್ಯಾಪ್ತಿಯ ೧೪ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಜುಲೈ ೧೩ ೨೦೨೧ ರಂದು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಆಯ್ಕೆ ಸಮಿತಿ ಸಭೆಯಲ್ಲಿ ಸದರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.
ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬAಧಪಟ್ಟAತೆ ಆಕ್ಷೇಪಣೆಗಳಿದ್ದಲ್ಲಿ ಜನವರಿ ೨೭ ಸಂಜೆ ೫.೩೦ ಗಂಟೆಯ ಒಳಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ತಿಳಿಸಲಾಗಿದೆ. ಅವಧಿ ಮೀರಿ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply