vijayapur

ಬಾಲ್ಯವಿವಾಹ ಪ್ರಕರಣಗಳ ಕುರಿತು ಸರಿಯಾದ ಮಾಹಿತಿ ಒದಗಿಸಿ-ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್


ವಿಜಯಪುರ ಜ.೮: ಜಿಲ್ಲೆಯ ಬಾಲ್ಯವಿವಾಹ ಪ್ರಕರಣಗಳಿಗೆ ಸಂಬAಧಪಟ್ಟAತೆ ಸರಿಯಾದ ಮಾಹಿತಿ ಹಾಗೂ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣಲ್ಲಿAದು ನಡೆದ ಕೇಂದ್ರ ಸರ್ಕಾರದ ಮಹಿಳಾ ಶಕ್ತಿ ಕೇಂದ್ರ ಯೋಜನೆಯಡಿಯ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ ೨೦೦೫ ನಿಯಮ ೦೬ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆ ಹಾಗೂ ಪರಿಶೀಲನಾ ಸಭೆ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲೂ ಬಾಲ್ಯವಿವಾಹ ಪ್ರಕರಣಗಳು ಕಂಡುಬರುತ್ತಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆ ಕುರಿತು ಸರಿಯಾದ ಮಾಹಿತಿ ಒದಗಿಸುವಂತೆ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಕೂಡಲೇ ಪರಿಹರಿಸಬೇಕು. ಸೀಜ್ ಮಾಡಲಾದ ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ನೀಡಲಾದ ನಿರ್ದೇಶನಗಳನ್ನು ಪಾಲಿಸಬೇಕು.
ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಯ ಬಗ್ಗೆಯೂ ಗಮನ ಹರಿಸಬೇಕು. ಅದು ಅಂಗನವಾಡಿಗಳಿಗೆ ಸಮರ್ಪಕವಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು.
ರಾಷ್ಟಿçÃಯ ಪೋಷಣ್ ಅಭಿಯಾನ ಯೋಜನೆಯಡಿ ಗರ್ಭಿಣಿಯರ, ಮಕ್ಕಳ ಅಪೌಷ್ಠಿಕತೆಯ ಮಾಹಿತಿಯನ್ನು ಸಕಾಲದಲ್ಲಿ ಮೊಬೈಲ್ ಆಪ್ ಮೂಲಕ ದಾಖಲಿಸಿ ಸಮರ್ಪಕ ಮಾಹಿತಿ ಒದಗಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೆಂಕಣ್ಣ ಹೊಸಮನಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪನಿರ್ದೇಶಕರಾದ ಕೆ.ಕೆ ಚವ್ಹಾಣ ಸೇರಿದಂತೆ ವಿವಿಧ ಇಲಾಖೆಗಳ ಇನ್ನೀತರ ಅಧಿಕಾರಿಗಳು ಉಪಸ್ಥಿತರಿದ್ದರು.


Leave a Reply