vijayapur

ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ RT-PCR ಗಂಟಲು ದ್ರವ ತಗೆಯುವ ಸೌಲಭ್ಯ


ವಿಜಯಪುರ ಜ.೮: ಕೋವಿಡ್ ಹಿನ್ನೆಲೆಯಲ್ಲಿ ಗಂಟಲು ದ್ರವ ಮಾದರಿಯನ್ನು ನಗರದ ೭ ಆರೋಗ್ಯ ಕೇಂದ್ರಗಳಲ್ಲಿ ಪ್ರತಿನಿತ್ಯ ಉಚಿತ ಖಖಿ-Pಅಖ ಗಂಟಲು ಮಾದರಿಗಳನ್ನು ತೆಗೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ತಿಳಿಸಿದ್ದಾರೆ.
ವಿಜಯಪುರ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ೧೯ RT-PCR ಗಂಟಲು ಮಾದರಿಗಳನ್ನು ತೆಗೆಯಲಾಗುತ್ತದೆ. ಅದರಂತೆ ಇನ್ನುಳಿದ ಎಪಿಎಂಸಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ದರ್ಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಂತಿನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಗಣೇಶ್ ನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ನವಬಾಗ/ ತಾಜ್ ಬಾವಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಸಮಿಕ್ಷಾ ಘಟಕ , ಜಿಲ್ಲಾ ಆಸ್ಪತ್ರೆ ಆವರಣ, ವಿಜಯಪುರದಲ್ಲಿ ಮಾದರಿಗಳನ್ನು ತಗೆಯುವ ಸೌಲಭ್ಯ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ೧೯ ಉಚಿತ RT-PCR  ಗಂಟಲು ಮಾದರಿಗಳನ್ನು ಜಿಲ್ಲೆಯ ಎಲ್ಲ ತಾಲೂಕ ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿಯೂ ತಗೆಯಲಾಗುತ್ತಿದ್ದು, ಸಾರ್ವಜನಿಕರು ಗಮನಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಸಮೀಕ್ಷಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ ಬಿರಾದಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪ್ಸೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.


Leave a Reply