BallaryGadagKoppal

ಜ.10 ರಂದು ಕರ್ನಾಟಕ ರಾಜ್ಯಪಾಲರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ


ಕೊಪ್ಪಳ ಜ.08  : ಕರ್ನಾಟಕ ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಜನವರಿ.10 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಜ.10 ರಂದು ಬೆಳಿಗ್ಗೆ 09-50 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ಏರ್‌ಪೋರ್ಟ್ದಿಂದ ಹೆಲಿಕ್ಯಾಪ್ಟರ್ ಮೂಲಕ ನಿರ್ಗಮಿಸಿ, ಬೆಳಿಗ್ಗೆ 11-30 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಉತ್ಸವ ನಡೆದ ಸ್ಥಳಕ್ಕೆ ಆಗಮಿಸುವರು. ಅಲ್ಲಿಂದ ಕಿಷ್ಕಿಂದದಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಆಂಜನೇಯ (ಹನುಮಾನಜೀ) ದೇವಸ್ಥಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ರಾಜ್ಯಪಾಲರು ಅಂದು ಮಧ್ಯಾಹ್ನ 01-20 ಕ್ಕೆ ಆನೆಗೊಂದಿ ಉತ್ಸವ ಸ್ಥಳದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರು ಕಡೆಗೆ ಪ್ರಯಾಣ ಬೆಳಸುವರು ಎಂದು ರಾಜ್ಯಪಾಲರ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply