hallur

ಶ್ರವಣದೋಷವುಳ್ಳ ವಿಕಲಚೇತನರಿಂದ ಅರ್ಜಿ ಆಹ್ವಾನ

0

ಗದಗ  ಜ 8: ಜಿಲ್ಲೆಯಲ್ಲಿರುವ ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಯ ಸ್ವಯಂ ಉದ್ಯೋಗಕ್ಕಾಗಿ  ಸ್ವಯಂ ಉದ್ಯೋಗ ಹೊಲಿಗೆ ಯಂತ್ರ ಯೋಜನೆಯಡಿ ಜಿಲ್ಲೆಯಲ್ಲಿನ ಸಾಮಾನ್ಯ,ಪ.ಜಾ. ಪ.ಪಂಗಡದ ಶ್ರವಣದೊಷವುಳ್ಳ ವಿಕಲಚೇತನ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತಮ್ಮ ವ್ಯಾಪ್ತಿಗೊಳಪಡುವ ವಿ.ಆರ್.ಡಬ್ಲೂ, ಯು.ಆರ್.ಡಬ್ಲೂ ಹಾಗೂ ಎಮ್.ಆರ್.ಡಬ್ಲೂಗಳಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ದಿ.29-01-2021 ರ ಸಾಯಂಕಾಲ 5 ಗಂಟೆಯೊಳಗಾಗಿ ಅಗತ್ಯ ಧೃಡೀಕೃತ ದಾಖಲಾತಿಗಳೊಂದಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ವಿ.ಆರ್.ಡಬ್ಲೂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಯು.ಆರ್.ಡಬ್ಲೂ ಹಾಗೂ ತಾಲೂಕು ಪಂಚಾಯತಿಯಲ್ಲಿರುವ ಎಮ್.ಆರ್.ಡಬ್ಲ್ಯೂಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಭವನ ಗದಗ ದೂ. 08372-220419ಗೆ ಸಂಪರ್ಕಿಸಬಹುದಾಗಿದೆ.

- Advertisement -

- Advertisement -

Leave A Reply

Your email address will not be published.