hallur

ವಿದ್ಯುತ್ ಮಗ್ಗ ಕಾರ್ಮಿಕರಿಗೆ ಒಂದು ಬಾರಿಯ ಆರ್ಥಿಕ ಪರಿಹಾರ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

0

ಗದಗ   8: ಕೋವಿಡ್-19 ಸಾಂಕ್ರ್ರಾಮಿಕ ರೋಗದ  ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ವಿದ್ಯುತ್‍ಮಗ್ಗ ನೇಕಾರರು ಸಂಕಷ್ಟದಲ್ಲಿರುವುದನ್ನು ಮನಗಂಡು ರಾಜ್ಯ ಸರ್ಕಾರವು 2020-21 ನೇ ಸಾಲಿಗೆ ವಿದ್ಯುತ್‍ಮಗ್ಗ ನೇಕಾರರಿಗೆ ತಲಾ ರೂ.2,000/-ಗಳ ನೆರವನ್ನು ನೀಡಲು ಯೋಜನೆಯನ್ನು ಜಾರಿಗೊಳಿಸಿ ಅರ್ಜಿ ಆಹ್ವಾನಿಸಲಾಗಿತ್ತು.  ಆದರೂ ಕೂಡ ಇನ್ನೂ ಹಲವಾರು ವಿದ್ಯುತ್ ಮಗ್ಗ ನೇಕಾರರು ಅರ್ಜಿ ಸಲ್ಲಿಸಿರುವುದಿಲ್ಲ.  ಆದಕಾರಣ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜನೆವರಿ 20 ರವರೆಗೆ ವಿಸ್ತರಿಸಲಾಗಿದೆ. ತಪ್ಪಿದ್ದಲ್ಲಿ ನಿಯಮಾನುಸಾರ ವಿದ್ಯುತ್ ಮಗ್ಗ ಘಟಕಗಳಿಗೆ ಸರ್ಕಾರದಿಂದ ಒದಗಿಸುತ್ತಿರುವ ವಿದ್ಯುಚ್ಛಕ್ತಿ ರಿಯಾಯಿತಿಯನ್ನು ಸ್ಥಗಿತಗೊಳಿಸಲು ಮೇಲಾಧಿಕಾರಿಗಳ ಸೂಕ್ತ ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ನರಸಾಪೂರ ಗದಗ-ಬೆಟಗೇರಿ, ದೂರವಾಣಿ ಸಂಖ್ಯೆ: 08372-218649  ಸಂಪರ್ಕಿಸಬಹುದಾಗಿದೆ.

- Advertisement -

- Advertisement -

Leave A Reply

Your email address will not be published.