Belagavi

ಸರಕಾರದ ಯೋಜನೆ ರೂಪಿಸಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು: ಕವಟಗಿಮಠ


ಬೈಲಹೊಂಗಲ ೯: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು ಎರಡು ಸರಕಾರಗಳು ಗ್ರಾಮ ಪಂಚಾಯತಿಗಳಿಗೆ ನೀಡುವ ಅನುದಾನ ಪಡೆದು ಸಮಗ್ರ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕೆಂದು ವಿಧಾನ ಪರಿಷತ್ ಸಚೇತಕ ಮಹಾಂತೇಶ ಕವಟಗಿಮಠ ನೂತನ ಗ್ರಾ.ಪಂ. ಸದಸ್ಯರಿಗೆ ಕರೆ ನೀಡಿದರು.
ಪಟ್ಟಣದ ಮುರಗೋಡ ರಸ್ತೆಯಲ್ಲಿರುವ ಗಣಾಚಾರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿದ ತಾಲೂಕಿನ ನೂತನ ಗ್ರಾ.ಪಂ. ಸದಸ್ಯರ ಸನ್ಮಾನ ಸಮಾರಂಭದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಸರಕಾರ ಗ್ರಾಮಗಳ ಅಭಿವೃದ್ಧಿಗೆ ಗ್ರಾ.ಪಂ ಗೆ ಹೆಚ್ಚಿನ ಅನುದಾನ ನೀಡಿದೆ. ಈ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ಅನುಷ್ಠಾನಗೊಳಿಸಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು, ರಸ್ತೆ, ಗಟಾರ, ಶೌಚಾಲಯ, ದೀಪಗಳ ವ್ಯವಸ್ಥೆ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕೆಂದು ನುಡಿದರು.
ಜಿಲ್ಲೆಯಲ್ಲಿ ಹೆಚ್ಚು ಜನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪಂಚಾಯತ ರಾಜ್ಯ ವ್ಯವಸ್ಥೆಯನ್ನು ಗಮನದಲ್ಲಿಟ್ಟು ಹೆಚ್ಚಿನ ಜವಾಬ್ದಾರಿಯಿಂದ ಗ್ರಾಮದ ಸರ್ವಾಂಗೀನ ಅಭಿವೃದ್ಧಿಗಳ ಕೆಲಸ ಮಾಡಿ ಗಾಂಧೀಜಿಯವರ ಕನಸು ನನಸು ಮಾಡಬೇಕೆಂದು ಕವಟಗಿಮಠ ಹೇಳಿದರು.
ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಮಾತನಾಡಿ ಗ್ರಾಮದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮವಾದ ಅಭಿವೃದ್ಧಿ ಕೆಲಸಗಳನ್ನು ಮಾಡಿ ಜನರ ಮನಸ್ಸು ಗೆಲ್ಲುವಂತಹ ಕಾರ್ಯಗಳನ್ನು ಮಾಡಬೇಕೆಂದು ನುಡಿದುರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಶಾಸಕ ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ನೂತನ ಗ್ರಾ.ಪಂ ಸದಸ್ಯರು ಗ್ರಾಮಗಳ ಅಭಿವೃದ್ದಿ ಕಡೆ ಹೆಚ್ಚಿನ ಗಮನಹರಿಸಿ ಸರಕಾರದ ಅನುದಾನವನ್ನು ಸದುಪಯೋಗ ಪಡೆದುಕೊಂಡು ಗ್ರಾಮದ ಸರ್ವಾಂಗೀನ ಅಭಿವೃದ್ಧಿಗೆ ಶ್ರಮಿಸಿ ರಾಜ್ಯದಲ್ಲಿ ಮಾದರಿ ಗ್ರಾಮವನ್ನಾಗಿಸಬೇಕೆಂದು ನುಡಿದರು.
ಜಿ.ಪಂ. ಸದಸ್ಯ ಈರಣ್ಣ ಕರಿಕಟ್ಟಿ, ಸವದತ್ತಿ ತಾ.ಪಂ. ಅಧ್ಯಕ್ಷ ವಿನಯಕುಮಾರ ದೇಸಾಯಿ, ಬೈಲಹೊಂಗಲ ತಾ.ಪಂ ಅಧ್ಯಕ್ಷೆ ಪಾರ್ವತಿ ನರೇಂದ್ರ, ಬೆಳಬಾವಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ರತ್ನಕ್ಕಾ ಗೌರಿ ಹಾಗೂ ಬಿಜೆಪಿ ಕಾರ್ಯಕರ್ತರು, ತಾಲೂಕಿನ ಗ್ರಾ.ಪಂ. ಸದಸ್ಯರು, ಮಹಿಳಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಇದ್ದರು. ಮಂಡಲ ಬಿಜೆಪಿ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ ಸ್ವಾಗತಿಸಿದರು.


Leave a Reply